
ದಾವಣಗೆರೆ, 15 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಭಾರತದ ಜನಗಣತಿ-2027ರ ಪೂರ್ವಭಾವಿ ಸಿದ್ಧತೆಯಾಗಿ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಡಿಜಿಟಲ್ ರೂಪದ ‘ಮನೆಪಟ್ಟಿ ಮತ್ತು ಮನೆಗಣತಿ’ ಕಾರ್ಯಚರಣೆಯು ಏಪ್ರಿಲ್ 16 ರಿಂದ ಮೇ 15 ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರಧಾನ ಜನಗಣತಿ ಅಧಿಕಾರಿಗಳು ತಿಳಿಸಿದ್ದಾರೆ.
ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ವಿಧಾನದಲ್ಲಿ ಈ ಜನಗಣತಿ ನಡೆಯುತ್ತಿದೆ. ಇದಕ್ಕಾಗಿ ವಿಶೇಷ ತಂತ್ರಾಂಶ ಮತ್ತು ಮೊಬೈಲ್ ಆಪ್ಗಳನ್ನು ಬಳಸಲಾಗುತ್ತಿದೆ̤
ಏಪ್ರಿಲ್ 16 ರಿಂದ ಮೇ 15 ರವರೆಗೆ ಒಂದು ತಿಂಗಳು ಕಾಲ ಜನಗಣತಿ ನಡೆಯಲಿದೆ, ಜಿಲ್ಲೆಯ ನಗರ ಮತ್ತು ಗ್ರಾಮೀಣ ಭಾಗದ ಒಟ್ಟು 3,509 ಬ್ಲಾಕ್ಗಳಿಗಾಗಿ 3,686 ಗಣತಿದಾರರು ಹಾಗೂ 617 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಜನಗಣತಿ 2027 ಮೊಬೈಲ್ ಆಪ್ ಮೂಲಕ ಡಿಜಿಟಲ್ ರೂಪದಲ್ಲಿ ಮಾಹಿತಿ ಪಡೆಯಲಿದ್ದಾರೆ. ಪ್ರತಿ ಕುಟುಂಬದಿಂದ ವಸತಿ ಸೌಕರ್ಯ, ಆಸ್ತಿ ಮತ್ತು ಮೂಲಭೂತ ಸೌಲಭ್ಯಗಳು ಸೇರಿದಂತೆ ಒಟ್ಟು 33 ಪ್ರಶ್ನೆಗಳಿಗೆ ಮಾಹಿತಿ ಸಂಗ್ರಹಿಸಲಾಗುತ್ತದೆ.
ಸಾರ್ವಜನಿಕರು ತಮ್ಮ ಮನೆಗೆ ಭೇಟಿ ನೀಡುವ ಗಣತಿದಾರರಿಗೆ ನಿಖರವಾದ ಮಾಹಿತಿ ನೀಡಿ, ರಾಷ್ಟ್ರೀಯ ಮಹತ್ವದ ಈ ಕಾರ್ಯಚರಣೆಯನ್ನು ಯಶಸ್ವಿಗೊಳಿಸಲು ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರಧಾನ ಜನಗಣತಿ ಅಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa