ಬ್ಯೂಟಿ ಪಾರ್ಲರ್, ಆಹಾರ ತಯಾರಿಕೆ ತರಬೇತಿ
ಕೊಪ್ಪಳ, 15 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ (ರಿ), ಹಳಿಯಾಳ ವತಿಯಿಂದ ಮೇ ತಿಂಗಳಿನಲ್ಲಿ ಬ್ಯೂಟಿ ಪಾರ್ಲರ್ ಹಾಗೂ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲಾ ಪೌಡರ್ ತಯಾರಿಕೆ ತರಬೇತಿಗಳು ಪ್ರಾರಂಭವಾಗಲಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಮಾಡ
ಬ್ಯೂಟಿ ಪಾರ್ಲರ್, ಆಹಾರ ತಯಾರಿಕೆ ತರಬೇತಿ


ಕೊಪ್ಪಳ, 15 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ (ರಿ), ಹಳಿಯಾಳ ವತಿಯಿಂದ ಮೇ ತಿಂಗಳಿನಲ್ಲಿ ಬ್ಯೂಟಿ ಪಾರ್ಲರ್ ಹಾಗೂ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲಾ ಪೌಡರ್ ತಯಾರಿಕೆ ತರಬೇತಿಗಳು ಪ್ರಾರಂಭವಾಗಲಿದ್ದು, ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ಮಾಡಲು ಈ ತರಬೇತಿಯು ಅನುಕೂಲವಾಗಲಿದ್ದು, 18 ರಿಂದ 50 ವಯಸ್ಸಿನ ಒಳಗಿರುವ ಆಸಕ್ತರು ಅರ್ಜಿ ಸಲ್ಲಿಸಬಹುದು. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ.

ಈ ತರಬೇತಿಯಲ್ಲಿ ಕೌಶಲ್ಯ, ಸಾಧನಾ ಪ್ರೇರಣಾ ತರಬೇತಿ, ಉದ್ಯಮಶಿಲತೆಯ ದಕ್ಷ ಗುಣಗಳು, ಹೊಸ ಉದ್ಯಮದ ಸ್ಥಾಪನೆ ಬಗ್ಗೆ ಮಾಹಿತಿ, ಮಾರುಕಟ್ಟೆ ಸಮೀಕ್ಷೆ, ಮಾರಾಟದ ತಂತ್ರಗಳು, ಯಶಸ್ವಿ ಉದ್ಯಮಗಳಿಂದ ಅನುಭವ ಹಂಚಿಕೆ, ಕ್ಷೇತ್ರ ಭೇಟಿ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿ0ದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುವುದು.

ತರಬೇತಿಯಲ್ಲಿ ಭಾಗವಹಿಸುವವರು ಏಪ್ರಿಲ್ 30ರ ರೊಳಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಂಪರ್ಕಿಸಲು ಹಾಗೂ ಸಂಸ್ಥೆಯ ದೂರವಾಣಿ ಸಂಖ್ಯೆ: 8217236973, 9483485489 ಹಾಗೂ 9482188780 ಗೆ ಅಥವಾ ಆನ್ಲೈನ ವೆಬ್ಸೈಟ್: www.rsetihaliyal.org ಗೆ ಅರ್ಜಿ ಸಲ್ಲಿಸಬಹುದು ಎಂದು ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande