ಗೋಮಾಳದ ಮಣ್ಣು ನೀಡಿಕೆಗೆ ವಿರೋಧ ; ಗ್ರಾಮಸ್ಥರ ಪ್ರತಿಭಟನೆ
ಬಾಗಲಕೋಟ, 15 ಏಪ್ರಿಲ್ (ಹಿ.ಸ.) : ಆ್ಯಂಕರ್ : ಗೋಮಾಳ ಭೂಮಿಯ ಮಣ್ಣನ್ನು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ನೀಡಿರುವುದನ್ನು ವಿರೋಧಿಸಿ, ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿ ಎದುರು ಹುನಗುಂದ ತಾಲ್ಲೂಕಿನ ಹೊನ್ನರಹಳ್ಳಿ ಗ್ರಾಮದ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಗ್ರಾಮಸ್ಥರು ಗೋಮಾಳ ಭೂಮಿ ಗ್ರಾಮಕ್ಕ
Protest


ಬಾಗಲಕೋಟ, 15 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಗೋಮಾಳ ಭೂಮಿಯ ಮಣ್ಣನ್ನು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ನೀಡಿರುವುದನ್ನು ವಿರೋಧಿಸಿ, ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿ ಎದುರು ಹುನಗುಂದ ತಾಲ್ಲೂಕಿನ ಹೊನ್ನರಹಳ್ಳಿ ಗ್ರಾಮದ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಗ್ರಾಮಸ್ಥರು ಗೋಮಾಳ ಭೂಮಿ ಗ್ರಾಮಕ್ಕೆ ಸೇರಿದ ಸಾರ್ವಜನಿಕ ಆಸ್ತಿ ಆಗಿದ್ದು, ಅದನ್ನು ಬೇರೆ ಉದ್ದೇಶಗಳಿಗೆ ಬಳಸುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಈ ಕ್ರಮದಿಂದ ಪಶುಗಳ ಮೇವು ಕೊರತೆ ಉಂಟಾಗುವ ಸಾಧ್ಯತೆ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ತಕ್ಷಣ ಈ ವಿಷಯದಲ್ಲಿ ಅಧಿಕಾರಿಗಳು ಗಮನಹರಿಸಿ ಗೋಮಾಳ ಭೂಮಿಯನ್ನು ಸಂರಕ್ಷಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande