
ವಿಜಯಪುರ, 15 ಏಪ್ರಿಲ್ (ಹಿ.ಸ.) :
ಆ್ಯಂಕರ್ : ನಡೆದಾಡುವ ದೇವರು, ಪರಮಪೂಜ್ಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ದಿವ್ಯ ಸ್ಮರಣಾರ್ಥವಾಗಿ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸಾವಳಸಂಗ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ವೃಕ್ಷೋದ್ಯಾನದ ಕಾಮಗಾರಿಗಳು ಯುದ್ಧೋಪಾದಿಯಲ್ಲಿ ವೇಗವಾಗಿ ಸಾಗುತ್ತಿವೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ತಿಳಿಸಿದರು.
ಪೂಜ್ಯ ಶ್ರೀಗಳು ತೋರಿದ ಪರಿಸರ ಸಂರಕ್ಷಣೆಯ ಹಾದಿಯನ್ನು ಮುಂದುವರಿಸುವುದು ನಮ್ಮೆಲ್ಲರ ಕರ್ತವ್ಯವೆಂದು ತಿಳಿಸಲಾಗಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ವಿಶ್ರಾಂತಿ, ಮಕ್ಕಳಿಗೆ ಆಟದ ಮೈದಾನ ಹಾಗೂ ಪ್ರವಾಸಿಗರಿಗೆ ಆಕರ್ಷಕ ಕೇಂದ್ರವಾಗುವಂತೆ ಉದ್ಯಾನವನವನ್ನು ಸುಸಜ್ಜಿತವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು
ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಲಾಗಿದ್ದು, ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಲೋಕಾರ್ಪಣೆಗೆ ಸಿದ್ಧಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande