
ಬಾಗಲಕೋಟೆ, 15 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ಮತಕ್ಷೇತ್ರದ ಅಮಿನಗಡ ಪಟ್ಟಣದ ಬಸ್ ಸ್ಟ್ಯಾಂಡ್ನಲ್ಲಿ ಇರುವ ಇಂದಿರಾ ಕ್ಯಾಂಟೀನ್ನಲ್ಲಿ ಅಸ್ವಚ್ಛತೆ ಹೆಚ್ಚಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಕ್ಯಾಂಟೀನ್ ಸುತ್ತಮುತ್ತ ಕಸದ ರಾಶಿ, ನೀರು ನಿಂತಿರುವ ಪರಿಸ್ಥಿತಿ ಕಂಡುಬರುತ್ತಿದ್ದು, ಜನರಿಗೆ ಅಲ್ಲಿ ಹೋಗಿ ಊಟ ಮಾಡುವುದು ಕಷ್ಟಕರವಾಗಿದೆ. ಉಪಚುನಾವಣೆ ಸಂದರ್ಭದಲ್ಲಿ ಕ್ಯಾಂಟೀನ್ ಕಾರ್ಯನಿರ್ವಹಿಸುತ್ತಿದ್ದರೂ, ಸ್ವಚ್ಛತೆ ಕಡೆಗಣಿಸಿರುವುದಾಗಿ ಸ್ಥಳೀಯರು ದೂರಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡುವ ಜವಾಬ್ದಾರಿ ಎಲ್ಲರದ್ದಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಜನರು ಸಮಾನವಾಗಿ ಗಮನ ಹರಿಸಬೇಕು ಎಂದು ಅಭಿಪ್ರಾಯ ವ್ಯಕ್ತವಾಗಿದೆ. ಕ್ಯಾಂಟೀನ್ ಪರಿಸ್ಥಿತಿಯನ್ನು ತಕ್ಷಣ ಸುಧಾರಿಸಿ, ಜನರಿಗೆ ಸ್ವಚ್ಛ ಮತ್ತು ಸುರಕ್ಷಿತ ವಾತಾವರಣ ಒದಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande