
ಬೆಂಗಳೂರು, 15 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕನ್ನಡ ಅಭಿವೃದ್ಧಿ ಪ್ರಾಧಿಕಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕದ ಬಹುಮುಖ ಪರಂಪರೆಯನ್ನು ಪ್ರತಿನಿಧಿಸುವ ಕನ್ನಡ ಸಾಮರಸ್ಯ ನೆಲೆಗಳು ಕುರಿತಾದ 41 ಕೃತಿಗಳನ್ನು ಲೋಕಾರ್ಪಣೆಗೊಳಿಸಿದರು.
ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಚಿವರಾದ ಶಿವರಾಜ್ ತಂಗಡಗಿ, ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶಾಸಕ ಪೊನ್ನಣ್ಣ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa