
ವಿಜಯಪುರ, 15 ಏಪ್ರಿಲ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದ ದೇವರನಾವದಗಿ ಗ್ರಾಮದಲ್ಲಿ 2025-26ನೇ ಸಾಲಿನ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ₹5 ಲಕ್ಷ ಮೊತ್ತದಲ್ಲಿ ಮಂಜೂರಾದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಸಿಂದಗಿ ಶಾಸಕ ಅಶೋಕ ಮನಗೂಳಿ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಲಕ್ಷ್ಮೀ ದೇವಸ್ಥಾನ ಸಮೀಪ ನಿರ್ಮಾಣವಾಗಲಿರುವ ಈ ಸಮುದಾಯ ಭವನ ಗ್ರಾಮಸ್ಥರಿಗೆ ವಿವಿಧ ಕಾರ್ಯಕ್ರಮಗಳು ಹಾಗೂ ಸಭೆಗಳನ್ನು ಆಯೋಜಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಲಮೇಲ ಪಟ್ಟಣ ಪಂಚಾಯತ್ ಅಧ್ಯಕ್ಷರು, ಮಾಜಿ ತಾಲೂಕಾ ಪಂಚಾಯತ್ ಸದಸ್ಯರು, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಇಲಾಖೆಗಳ ನಾಮ ನಿರ್ದೇಶಿತ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande