
ಕೊಪ್ಪಳ, 15 ಏಪ್ರಿಲ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನ ಹಿಂಗಾರು ಹಂಗಾಮಿನ ಹವಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಮೇಣಸಿನಕಾಯಿ ಬೆಳೆಗೆ ಸಂಬಂಧಿಸಿದಂತೆ ತಿರಸ್ಕೃತಗೊಂಡ ಪ್ರಸ್ತಾವನೆಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೊಪ್ಪಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
2025-26ನೇ ಸಾಲಿನ ಹಿಂಗಾರು ಹಂಗಾಮಿನ ಹವಮಾನ ಆಧಾರಿತ ಬೆಳೆ ವಿಮ ಯೋಜನೆಯ ಮೆಣಸಿನಕಾಯಿ ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ಬೆಳೆ ನೋಂದಣಿ ಪ್ರಸ್ತಾವನೆಗಳೊಂದಿಗೆ ಹೊಲಿಕೆ ಮಾಡಿ ಹೊಂದಾಣಿಕೆಯಾಗದ, ತಿರಸ್ಕೃತಗೊಂಡ ಪ್ರಸ್ತಾವನೆಗಳಿಗೆ ರೈತರಿಂದ ಆಕ್ಷೇಪಣೆಗಳನ್ನು ಸ್ವೀಕರಿಸಲು ಕೊಪ್ಪಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯಿಂದ ನೋಟಿಸ್ಗಳನ್ನು ಹೊರಡಿಸಲಾಗಿದೆ.
ರೈತರು ತಮ್ಮ ಆಕ್ಷೇಪಣೆಗಳನ್ನು 10 ದಿನಗಳೊಳಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಕರು(ಜಿ.ಪಂ), ಕೊಪ್ಪಳ ರವರ ಕಛೇರಿಗೆ ಸಲ್ಲಿಸುವಂತೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್