ಸ್ವಯಂ ಗಣತಿ : ಶಾಸಕ ನಾರಾ ಭರತರೆಡ್ಡಿ
ಬಳ್ಳಾರಿ, 15 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ''ಜನಗಣತಿ 2027'' ಅಂಗವಾಗಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಇಂದು ತಮ್ಮ ನಿವಾಸದಲ್ಲಿ ಸ್ವಯಂ ಗಣತಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು. ತಮ್ಮ ಕುಟುಂಬದ ವಿವರಗಳನ್ನು ಆನ್ಲೈನ್ ಪೋರ್ಟಲ
ಸ್ವಯಂ ಗಣತಿ : ಶಾಸಕ ನಾರಾ ಭರತರೆಡ್ಡಿ


ಬಳ್ಳಾರಿ, 15 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ 'ಜನಗಣತಿ 2027' ಅಂಗವಾಗಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಇಂದು ತಮ್ಮ ನಿವಾಸದಲ್ಲಿ ಸ್ವಯಂ ಗಣತಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು. ತಮ್ಮ ಕುಟುಂಬದ ವಿವರಗಳನ್ನು ಆನ್ಲೈನ್ ಪೋರ್ಟಲ್ ಮೂಲಕ ದಾಖಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಅಭಿವೃದ್ಧಿ ಯೋಜನೆಗಳ ರೂಪಿಸುವಿಕೆಯಲ್ಲಿ ಜನಗಣತಿಯು ಬಹಳ ಮುಖ್ಯವಾದ ಪಾತ್ರ ವಹಿಸುತ್ತದೆ. ಪ್ರತಿಯೊಬ್ಬ ನಾಗರಿಕನು ನಿಖರವಾದ ಮಾಹಿತಿಯನ್ನು ನೀಡುವುದು ಸರ್ಕಾರದ ಕರ್ತವ್ಯಕ್ಕೆ ಸಹಕಾರಿಯಾದಂತೆ ಎಂದು ತಿಳಿಸಿದರು.

ಈ ಗಣತಿಯ ದತ್ತಾಂಶವು ಮುಂದಿನ ದಿನಗಳಲ್ಲಿ ಕ್ಷೇತ್ರದ ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳ ಅನುಷ್ಠಾನಕ್ಕೆ ದಾರಿದೀಪವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಳ್ಳಾರಿ ನಗರದ ಪ್ರತಿಯೊಂದು ಕುಟುಂಬವೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸಿ, ಗಣತಿದಾರರಿಗೆ ಸಹಕರಿಸಬೇಕು ಎಂದು ಅವರು ವಿನಂತಿಸಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande