
ಬೆಂಗಳೂರು, 15 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಪ್ರತಿಷ್ಠಿತ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಶ್ರೀ ಸಿದ್ದರಾಮ ಶರಣರು ಬೆಲ್ದಾಳ, ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪುರಸ್ಕಾರಕ್ಕೆ ಶ್ರೀ ಭಾನು ಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಪ್ರತಿಷ್ಠಿತ ಪಂಪ ಪ್ರಶಸ್ತಿಗೆ ದೇವನೂರು ಮಹಾದೇವ ಭಾಜನ- ಸಚಿವ ಶಿವರಾಜ ತಂಗಡಗಿ
ಬೆಂಗಳೂರು, ಏಪ್ರಿಲ್ 15-ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡಲಾಗುವ ವಿವಿಧ ಪ್ರಶಸ್ತಿಗಳಿಗೆ ಗಣ್ಯರನ್ನು ಆಯ್ಕೆ ಮಾಡಲಾಗಿದ್ದು 2025 26 ನೇ ಸಾಲಿನ ಪ್ರತಿಷ್ಠಿತ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಶ್ರೀ ಸಿದ್ದರಾಮ ಶರಣರು ಬೆಲ್ದಾಳ, ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪುರಸ್ಕಾರಕ್ಕೆ ಶ್ರೀ ಭಾನು ಕೀರ್ತಿ ಭಟ್ಟಾರಕ ಸ್ವಾಮೀಜಿಗಳು, ಕಂಬದಹಳ್ಳಿ,
ಹಾಗೂ ಪ್ರತಿಷ್ಠಿತ ಪಂಪ ಪ್ರಶಸ್ತಿಗೆ ಖ್ಯಾತ ಸಾಹಿತಿ ದೇವನೂರು ಮಹಾದೇವ ಅವರು ಭಾಜನರಾಗಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಇದಲ್ಲದೆ ಕೆ ಜಿ ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿಗೆ ಶ್ರೀ ಅಲ್ಲಾಭಕ್ಷ್ ಮೀರಸಾಹೇಬ ಮಿರ್ಜಿ,
ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಗೆ ಡಾ. ಸುಕನ್ಯಾ ಮಾರುತಿ,
ಡಾ ಗುಬ್ಬಿ ವೀರಣ್ಣ ಪ್ರಶಸ್ತಿಗೆ ಶ್ರೀಮತಿ ಜಿ ವಿ ಶಾರದಾ,
ಬಿ ವಿ ಕಾರಂತ ಪ್ರಶಸ್ತಿಗೆ ಶ್ರೀ ಪ್ರಸನ್ನ, ಶಿವಮೊಗ್ಗ,
ಡಾ. ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿಗೆ ಶ್ರೀ ಗಂಗಾರಾಮ ಚಂಡಾಳ ,ಕೋಲಾರ.
ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿಗೆ ಶ್ರೀ ವಿ ಹರಿ ರಾಮ್,
ಜಕಣಾಚಾರಿ ಪ್ರಶಸ್ತಿಗೆ ಶ್ರೀ ಅಶೋಕ್ ಗುಡಿಗಾರ್,
ಜಾನಪದ ಶ್ರೀ ಪ್ರಶಸ್ತಿಗೆ ಶ್ರೀ ಎಂ ಮಹದೇವಯ್ಯ ಹಾಗೂ ಬಿ ಲಕ್ಷ್ಮಣ ಅವರನ್ನು ಆಯ್ಕೆ ಮಾಡಲಾಗಿದೆ.
ಸಂಗೊಳ್ಳಿ ರಾಯಣ್ಣ ಪ್ರಶಸ್ತಿ- ಶ್ರೀ ಸಿದ್ದನಗೌಡ ಪಾಟೀಲ್. ಧಾರವಾಡ.
ಅಕ್ಕಮಹಾದೇವಿ ಪ್ರಶಸ್ತಿ- ಶ್ರೀಮತಿ ಕೆ ನೀಲಾ,
ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರ ಪ್ರಶಸ್ತಿಗೆ ಪ್ರೊ.ಎಸ್ ಜಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.
ಕುಮಾರವ್ಯಾಸ ಪ್ರಶಸ್ತಿಗೆ- ಶ್ರೀಕಲ್ಲಿನಾಥ ಶಾಸ್ತ್ರಿ, ಗದಗ.
ನಾಟ್ಯರಾಣಿ ಶಾಂತಲಾ ಪ್ರಶಸ್ತಿಗೆ- ಶ್ರೀಮತಿ ಪ್ರತಿಭಾ ಪ್ರಹ್ಲಾದ್ ಅವರನ್ನು ಆಯ್ಕೆ ಮಾಡಲಾಗಿದೆ.
ಎಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಹಾರ್ದಿಕ ಅಭಿನಂದನೆಗಳು ಎಂದು ತಿಳಿಸಿರುವ ಸಚಿವ ಶಿವರಾಜ ತಂಗಡಗಿ ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳ ದಿನಾಂಕ ಪಡೆದು ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಆಯೋಜನೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ