
ಚಿಕ್ಕಬಳ್ಳಾಪುರ, 15 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಚಿಕ್ಕಬಳ್ಳಾಪುರ ಕ್ರೀಡಾಂಗಣದ ಅಭಿವೃದ್ಧಿಗೆ ₹10 ಕೋಟಿ ವಿಶೇಷ ಅನುದಾನ ಒದಗಿಸಲಾಗಿದ್ದು, ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ಸಚಿವ ಎಂ.ಸಿ. ಸುಧಾಕರ್ ಪರಿಶೀಲಿಸಿದರು.
ಕ್ರೀಡಾಂಗಣದ ಅಭಿವೃದ್ಧಿಯನ್ನು ಹಂತ ಹಂತವಾಗಿ ಕೈಗೊಳ್ಳಲಾಗುತ್ತಿದ್ದು, ಪ್ರಸ್ತುತ ಪೆವಿಲಿಯನ್ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇದರ ಜೊತೆಗೆ ಪ್ರತ್ಯೇಕ ಅನುದಾನದಡಿ ಒಳಾಂಗಣ ಕ್ರೀಡಾಂಗಣದ ಉನ್ನತೀಕರಣ ಕಾಮಗಾರಿಯೂ ಪ್ರಗತಿಯಲ್ಲಿದೆ.
ಕಾಮಗಾರಿಗಳ ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆ ಹಾಗೂ ನಿಗದಿತ ಅವಧಿಯೊಳಗೆ ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕ್ರೀಡಾಪಟುಗಳಿಗೆ ಉತ್ತಮ ಮೂಲಸೌಕರ್ಯ ಕಲ್ಪಿಸುವ ಉದ್ದೇಶದಿಂದ ಎಲ್ಲಾ ಕಾಮಗಾರಿಗಳನ್ನು ಸಮರ್ಪಕವಾಗಿ ಪೂರ್ಣಗೊಳಿಸಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಭು ಜಿ. ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa