ಚಿಕ್ಕಪೇಟೆ ವಾರ್ಡ್ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ದಿನೇಶ್ ಗುಂಡೂರಾವ್
ಬೆಂಗಳೂರು, 15 ಏಪ್ರಿಲ್ (ಹಿ.ಸ.) : ಆ್ಯಂಕರ್ : ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆ ವಾರ್ಡ್ನಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಸಚಿವ ದಿನೇಶ್ ಗುಂಡೂರಾವ್ ಪರಿಶೀಲಿಸಿದರು. ವೆಂಕಟೇಶ್ವರ ಸ್ವೀಟ್ ಸ್ಟಾಲ್ನಿಂದ ಆರ್.ಕೆ. ಸ್ಟ್ರೀಟ್ ವರೆಗೆ ನಿರ್ಮಿಸಲಾಗುತ್ತಿರು
Visit


ಬೆಂಗಳೂರು, 15 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆ ವಾರ್ಡ್ನಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಸಚಿವ ದಿನೇಶ್ ಗುಂಡೂರಾವ್ ಪರಿಶೀಲಿಸಿದರು.

ವೆಂಕಟೇಶ್ವರ ಸ್ವೀಟ್ ಸ್ಟಾಲ್ನಿಂದ ಆರ್.ಕೆ. ಸ್ಟ್ರೀಟ್ ವರೆಗೆ ನಿರ್ಮಿಸಲಾಗುತ್ತಿರುವ ನೂತನ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಅವರು ಸ್ಥಳದಲ್ಲೇ ವೀಕ್ಷಿಸಿದರು. ಇದೇ ವೇಳೆ ಪೈಪ್ಗಳ ಅಳವಡಿಕೆ, ರಸ್ತೆ ವಿಸ್ತೀರ್ಣ ಹಾಗೂ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸಲಹೆಗಳನ್ನು ನೀಡಿದರು.

ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುಣಮಟ್ಟದಲ್ಲಿ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande