
ಬೆಂಗಳೂರು, 16 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಇಂದು ಬೆಳಗಿನ ಜಾವ ಆಂಧ್ರಪ್ರದೇಶದ ಮಂತ್ರಾಲಯದ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಮಂತ್ರಾಲಯ ದರ್ಶನಕ್ಕೆ ತೆರಳಿದ್ದ ಕರ್ನಾಟಕದ ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಯ ಎಂಟು ಭಕ್ತರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ದುಃಖವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಈ ದುರ್ಘಟನೆಯಲ್ಲಿ ಜೀವ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ತಕ್ಷಣ ಸೂಕ್ತ ಪರಿಹಾರ ನೀಡಬೇಕು ಹಾಗೂ ಗಾಯಗೊಂಡವರಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.
ಮೃತರ ಆತ್ಮಗಳಿಗೆ ಭಗವಂತ ಚಿರಶಾಂತಿ ನೀಡಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬಸ್ಥರಿಗೆ ದೊರಕಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬೊಮ್ಮಾಯಿ ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa