ಮಂತ್ರಾಲಯ ಸಮೀಪ ಭೀಕರ ಅಪಘಾತ ; ಎಂಟು ಭಕ್ತರ ಸಾವಿಗೆ ಕುಮಾರಸ್ವಾಮಿ ಸಂತಾಪ
ಬೆಂಗಳೂರು, 16 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮಂತ್ರಾಲಯದ ಸಮೀಪ ಇಂದು ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಂದಿ ಭಕ್ತರು ಮೃತಪಟ್ಟ ಘಟನೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀ ಗುರುರಾಯರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಅಪಘಾತಕ್
ಮಂತ್ರಾಲಯ ಸಮೀಪ ಭೀಕರ ಅಪಘಾತ ; ಎಂಟು ಭಕ್ತರ ಸಾವಿಗೆ ಕುಮಾರಸ್ವಾಮಿ ಸಂತಾಪ


ಬೆಂಗಳೂರು, 16 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮಂತ್ರಾಲಯದ ಸಮೀಪ ಇಂದು ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಂದಿ ಭಕ್ತರು ಮೃತಪಟ್ಟ ಘಟನೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಶ್ರೀ ಗುರುರಾಯರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಅಪಘಾತಕ್ಕೀಡಾದವರಲ್ಲಿ ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ಭಕ್ತರು ಸೇರಿದ್ದಾರೆ. ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, “ಮಂತ್ರಾಲಯದ ಸಮೀಪ ಇಂದು ಬೆಳಗಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಶ್ರೀ ಗುರುರಾಯರ ದರ್ಶನಕ್ಕೆ ತೆರಳಿದ್ದ ಚಿಕ್ಕಮಗಳೂರು, ಹಾಸನ ಜಿಲ್ಲೆಯ ಎಂಟು ಮಂದಿ ಭಕ್ತರು ಸಾವನ್ನಪ್ಪಿ, ಕೆಲವರು ಗಾಯಗೊಂಡಿರುವ ಸುದ್ದಿ ತಿಳಿದು ಬಹಳ ದುಃಖವಾಯಿತು” ಎಂದು ಹೇಳಿದ್ದಾರೆ.

ಮೃತರಾದ ಎಲ್ಲರ ಆತ್ಮಗಳಿಗೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ದೊರಕಲಿ ಎಂದು ಅವರು ಪ್ರಾರ್ಥಿಸಿದ್ದಾರೆ. ಜೊತೆಗೆ, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಆಶಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande