
ಬಳ್ಳಾರಿ, 16 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಸಾಲಿಗೆ ಬಳ್ಳಾರಿ ತಾಲ್ಲೂಕು, ಕುರುಗೋಡು ಮತ್ತು ಕಂಪ್ಲಿ ತಾಲ್ಲೂಕಿನ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಾಗಿರಬೇಕು. ಪ್ರಸ್ತುತ 5ನೇ ತರಗತಿಯಲ್ಲಿ ಕನಿಷ್ಠ ಶೇ. 60ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಪ್ರತಿಭಾವಂತ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ.
ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ನಗರದ ನಲ್ಲಚೆರುವು ಪ್ರದೇಶದ ಸ್ಟೇಡಿಯಂ ರಸ್ತೆಯ ವಾಲ್ಮೀಕಿ ಭವನದ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಮೇ 04 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.9141004607 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa