
ಹಾಸನ, 16 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಾಲ್ಯವಿವಾಹ ನಿಷೇಧಕ್ಕೆ ಸಂಬಂಧಿಸಿದಂತೆ ಶೂನ್ಯ ಸಹಿಷ್ಣುತೆ ಹೊಂದಿರುವ ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯಿತಿಗಳನ್ನು ಗುರುತಿಸಿ ಜಿಲ್ಲೆಯ ಒಂದು ಗ್ರಾಮ ಪಂಚಾಯಿತಿಗೆ ರೂ.25,000 ಗಳಂತೆ ಪ್ರಶಸ್ತಿ ನೀಡಲು ಆದೇಶಿಸಿದ್ದು, 2024-25 ನೇ ಸಾಲಿನ ಬಾಲ್ಯವಿವಾಹ ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿ ನೀಡುವ ಸಲುವಾಗಿ ನಿಗದಿತ ನಮೂನೆಯಲ್ಲಿ ದಾಖಲಾತಿಗಳೊಂದಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸ್ತಾವನೆಗಳನ್ನು ಸಲ್ಲಿಸಲು ಮೇ.08 ರಂದು ಕೊನೆಯ ದಿನಾಂಕವಾಗಿದ್ದು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಾಸನ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಸಂಪಿಗೆ ರಸ್ತೆ, ಮಸೀದಿ ಹತ್ತಿರ, ಕೆ.ಆರ್.ಪುರಂ, ದೂರವಾಣಿ ಸಂಖ್ಯೆ:08172-231360ಗೆ ಸಂರ್ಪಕಿಸಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa