11.86 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ : ಇಬ್ಬರು ವಿದೇಶಿ ಮಹಿಳೆಯರು ಸೇರಿ 10 ಮಂದಿ ಬಂಧನ
ಬೆಂಗಳೂರು, 16 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬೆಂಗಳೂರು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 11.86 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದ್ದು, ಇಬ್ಬರು ವಿದೇಶಿ ಮಹಿಳೆಯರು ಸೇರಿದಂತೆ ಒಟ್ಟು 10 ಆರೋಪಿಗಳನ್ನು ಬಂಧಿಸಲಾಗಿದೆ. ನಗರದ ಯಲಹಂಕ, ಡಿ.ಜೆ.ಹಳ್ಳಿ, ಬಾಣಸವಾಡಿ, ಕೋರಮಂಗಲ, ಬೊಮ
Police pc


ಬೆಂಗಳೂರು, 16 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬೆಂಗಳೂರು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 11.86 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದ್ದು, ಇಬ್ಬರು ವಿದೇಶಿ ಮಹಿಳೆಯರು ಸೇರಿದಂತೆ ಒಟ್ಟು 10 ಆರೋಪಿಗಳನ್ನು ಬಂಧಿಸಲಾಗಿದೆ.

ನಗರದ ಯಲಹಂಕ, ಡಿ.ಜೆ.ಹಳ್ಳಿ, ಬಾಣಸವಾಡಿ, ಕೋರಮಂಗಲ, ಬೊಮ್ಮನಹಳ್ಳಿ ಹಾಗೂ ಪುಲಿಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಪೊಲೀಸರು ಸಮನ್ವಯದ ದಾಳಿ ನಡೆಸಿದರು. ಕಾರ್ಯಾಚರಣೆಯಲ್ಲಿ 5.9 ಕೆಜಿ ಎಂಡಿಎಂಎ, 1.15 ಕೆಜಿ ಕೊಕೇನ್, 21 ಕೆಜಿ ಗಾಂಜಾ ಹಾಗೂ 19 ಗ್ರಾಂ ಎಕ್ಸ್ಟೆಸಿ ಮಾತ್ರೆಗಳು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಡ್ರಗ್ಸ್ ಸಾಗಣೆ ಮತ್ತು ಪೂರೈಕೆಗೆ ಬಳಸುತ್ತಿದ್ದ ಒಂದು ದ್ವಿಚಕ್ರ ವಾಹನವನ್ನು ಸಹ ಸೀಜ್ ಮಾಡಲಾಗಿದೆ.

ಪೊಲೀಸರ ತನಿಖೆಯಲ್ಲಿ ಬಂಧಿತ ವಿದೇಶಿ ಮಹಿಳೆಯರು ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿ ವಿದ್ಯಾರ್ಥಿಗಳು, ಯುವಕರು ಹಾಗೂ ಐಟಿ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಹೊರರಾಜ್ಯಗಳಲ್ಲಿಯೂ ಆರೋಪಿಗಳ ಸಂಪರ್ಕ ಜಾಲವಿದ್ದು, ನಗರದಲ್ಲಿ ವ್ಯಾಪಕವಾಗಿ ಮಾದಕ ವಸ್ತು ಮಾರಾಟ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸೀಮಂತ ಕುಮಾರ ಸಿಂಗ್, “ನಗರದಲ್ಲಿ ಡ್ರಗ್ಸ್ ಜಾಲದ ವಿರುದ್ಧ ನಿರಂತರ ಕಾರ್ಯಾಚರಣೆ ಮುಂದುವರಿಯಲಿದೆ. ವಿದ್ಯಾರ್ಥಿಗಳು ಮತ್ತು ಯುವಕರನ್ನು ಗುರಿಯಾಗಿಸಿಕೊಂಡು ಡ್ರಗ್ಸ್ ಮಾರಾಟ ಮಾಡುವವರ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸಲಾಗುತ್ತಿದೆ. ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ಮೇಲೂ ವಿಶೇಷ ನಿಗಾ ಇಡಲಾಗಿದೆ,” ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಡ್ರಗ್ಸ್ ಜಪ್ತಿ ಪ್ರಕರಣಗಳು ಹೆಚ್ಚಾಗುತ್ತಿವೆ. ಮಾರ್ಚ್ 12ರಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 4 ಕೋಟಿ ರೂ. ಮೌಲ್ಯದ ಹೆರಾಯಿನ್ ಸಾಗಿಸುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಲಾಗಿತ್ತು. ಮಾರ್ಚ್ 28ರಂದು ಎಲೆಕ್ಟ್ರಾನಿಕ್ ಸಿಟಿಯಲ್ಲಿ ನೈಜೀರಿಯನ್ ಪ್ರಜೆಯಿಂದ 2.5 ಕೋಟಿ ರೂ. ಮೌಲ್ಯದ ಸಿಂಥೆಟಿಕ್ ಡ್ರಗ್ಸ್ ವಶಪಡಿಸಿಕೊಳ್ಳಲಾಗಿತ್ತು. ಏಪ್ರಿಲ್ 5ರಂದು ದೊಡ್ಡಬಳ್ಳಾಪುರ ರಸ್ತೆಯಲ್ಲಿ ಅಂತರಾಷ್ಟ್ರೀಯ ಡ್ರಗ್ಸ್ ಜಾಲವನ್ನು ಭೇದಿಸಿ 5 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande