ಹಾಸನ ಜಿಲ್ಲೆಯಲ್ಲಿ ಪೆಟ್ರೋಲ್ ಡೀಸೆಲ್ ಅಗತ್ಯ ದಾಸ್ತಾನು ಲಭ್ಯ
ಹಾಸನ, 16 ಏಪ್ರಿಲ್ (ಹಿ.ಸ.) : ಆ್ಯಂಕರ್ : ಹಾಸನ ಜಿಲ್ಲೆಯ ಪೆಟ್ರೋಲ್ ಬಂಕ್ ಹಾಗೂ ಡೀಸೆಲ್ ಉಪಯೋಗಿಸುವ ಗ್ರಾಹಕರಿಗೆ ತಿಳಿಯಪಡಿಸುವುದೆನೆಂದರೆ, ಜಿಲ್ಲೆಯಲ್ಲಿ ಒಟ್ಟು 228 ಪೆಟ್ರೋಲ್ ಬಂಕ್ ಗಳು ಕಾರ್ಯನಿರ್ವಹಿಸುತ್ತಿದ್ದು, ಸದರಿ ಪೆಟ್ರೋಲ್ ಬಂಕ್ ಗಳಲ್ಲಿ ದಾಸ್ತಾನು ಅಗತ್ಯ ಪ್ರಮಾಣದಲ್ಲಿ ಲಭ್ಯವಿರುವು
ಹಾಸನ ಜಿಲ್ಲೆಯಲ್ಲಿ ಪೆಟ್ರೋಲ್ ಡೀಸೆಲ್ ಅಗತ್ಯ ದಾಸ್ತಾನು ಲಭ್ಯ


ಹಾಸನ, 16 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಹಾಸನ ಜಿಲ್ಲೆಯ ಪೆಟ್ರೋಲ್ ಬಂಕ್ ಹಾಗೂ ಡೀಸೆಲ್ ಉಪಯೋಗಿಸುವ ಗ್ರಾಹಕರಿಗೆ ತಿಳಿಯಪಡಿಸುವುದೆನೆಂದರೆ, ಜಿಲ್ಲೆಯಲ್ಲಿ ಒಟ್ಟು 228 ಪೆಟ್ರೋಲ್ ಬಂಕ್ ಗಳು ಕಾರ್ಯನಿರ್ವಹಿಸುತ್ತಿದ್ದು, ಸದರಿ ಪೆಟ್ರೋಲ್ ಬಂಕ್ ಗಳಲ್ಲಿ ದಾಸ್ತಾನು ಅಗತ್ಯ ಪ್ರಮಾಣದಲ್ಲಿ ಲಭ್ಯವಿರುವುದರಿಂದ, ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಜಿಲ್ಲಧಿಕಾರಿ ತಿಳಿಸಿದ್ದಾರೆ.

ಯಾವುದಾದರೂ ಪೆಟ್ರೋಲ್ ಬಂಕ್ ನಲ್ಲಿ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿರುವುದು ಕಂಡುಬಂದಲ್ಲಿ, ಗ್ರಾಹಕರಿಗೆ ಪೆಟ್ರೋಲ್ ಹಾಗೂ ಡೀಸೆಲ್ ನೀಡದೆ ಇದ್ದಲ್ಲಿ ಅಥವಾ ಕಂಪನಿಗಳು ನಿಗಧಿ ಪಡಿಸಿದ ಸಮಯದಲ್ಲಿ ಕಾರ್ಯನಿರ್ವಹಿಸದೆ ಇದ್ದಲ್ಲಿ ಸಾರ್ವಜನಿಕರು ಸಂಬಂಧಿಸಿದ ತಾಲ್ಲೂಕಿನ ತಹಶೀಲ್ದಾರ ಕಚೇರಿಯ ಆಹಾರ ಇಲಾಖೆ ಸಿಬ್ಬಂದಿಗೆ ಹಾಗೂ ಹಾಸನ ಜಿಲ್ಲೆಯ ಜಂಟಿ ನಿರ್ದೇಶಕರ ಕಚೇರಿಯ ದೂರವಾಣಿ ಸಂಖ್ಯೆ: 9606025519 ಸಂಖ್ಯೆಗೆ 24*7 ದೂರು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande