
ಬಳ್ಳಾರಿ, 16 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಶ್ರೀ ಭಗೀರಥ ಜಯಂತಿ ಅಂಗವಾಗಿ ಏಪ್ರಿಲ್ 23ರಂದು ಬೆಳಿಗ್ಗೆ 11.30 ಗಂಟೆಗೆ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಳ್ಳಾರಿ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮವನ್ನು ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ನಾರಾ ಭರತ್ ರೆಡ್ಡಿ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಈ. ತುಕರಾಮ್, ಕೆ. ರಾಜಶೇಖರ ಬಸವರಾಜ ಹಿಟ್ನಾಳ್, ಡಾ. ಸೈಯದ್ ನಾಸೀರ್ ಹುಸೇನ್, ಜೆ.ಎನ್. ಗಣೇಶ್, ಮುಂಡರಗಿ ನಾಗರಾಜ್, ಬಿ. ನಾಗೇಂದ್ರ, ಬಿ.ಎಂ. ನಾಗರಾಜ, ಈ. ಅನ್ನಪೂರ್ಣ, ಡಾ. ಚಂದ್ರಶೇಖರ ಬಿ. ಪಾಟೀಲ, ಶಶೀಲ್ ಜಿ. ನಮೋಶಿ ಹಾಗೂ ವೈ.ಎಂ. ಸತೀಶ್ ಸೇರಿದಂತೆ ಹಲವು ಗಣ್ಯರು ಹಾಗೂ ಜಿಲ್ಲೆಯ ಉಪ್ಪಾರ ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಸಂಗನಕಲ್ಲಿನ ನಿವೃತ್ತ ಶಿಕ್ಷಕರಾದ ಕೆ.ಬಿ. ಸಿದ್ದಲಿಂಗಪ್ಪ ಅವರು ವಿಶೇಷ ಉಪನ್ಯಾಸ ನೀಡಲಿದ್ದು, ಶೈಲಾ ದೇವರಮನಿ ತಂಡದಿಂದ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 10 ಗಂಟೆಗೆ ಮುನಿಸಿಪಲ್ ಕಾಲೇಜು ಮೈದಾನದಿಂದ ಮೆರವಣಿಗೆ ಆರಂಭವಾಗಲಿದೆ. ಮೆರವಣಿಗೆ ಗಡಿಗಿ ಚೆನ್ನಪ್ಪ ವೃತ್ತ, ರೈಲ್ವೇ ನಿಲ್ದಾಣ ರಸ್ತೆ, ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಹೆಚ್.ಆರ್. ಗವಿಯಪ್ಪ ವೃತ್ತ ಮಾರ್ಗವಾಗಿ ಸಾಗಿಸಿ, ಅಂತಿಮವಾಗಿ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ವೇದಿಕೆ ಕಾರ್ಯಕ್ರಮದವರೆಗೆ ತಲುಪಲಿದೆ.
ಕಾರ್ಯಕ್ರಮದಲ್ಲಿ ನಾಗೇಂದ್ರ ಪ್ರಸಾದ್ ಕೆ., ಡಾ. ಸುಮನ್ ಡಿ. ಪನ್ನೇಕರ್, ಮಹಮ್ಮದ್ ಹಾರೀಸ್ ಸುಮೇರ್, ಮಹಮ್ಮದ್ ಝುಬೇರ್ ಎನ್. ಹಾಗೂ ಪಿ.ಎಸ್. ಮಂಜುನಾಥ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa