ಏ.21ರಂದು ಬಳ್ಳಾರಿಯಲ್ಲಿ ಶ್ರೀ ಶಂಕರಾಚಾರ್ಯರ ಜಯಂತಿ
ಬಳ್ಳಾರಿ, 16 ಏಪ್ರಿಲ್ (ಹಿ.ಸ.) : ಆ್ಯಂಕರ್ : ಶ್ರೀ ಶಂಕರಾಚಾರ್ಯರ ಜಯಂತಿ ಅಂಗವಾಗಿ ಏಪ್ರಿಲ್ 21ರಂದು ಬೆಳಿಗ್ಗೆ 11 ಗಂಟೆಗೆ ಭಾರತಿ ತೀರ್ಥ ಸಭಾಭವನನಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಳ್ಳಾರಿ ಮಹಾನಗರ ಪಾಲಿಕೆ
ಏ.21ರಂದು ಬಳ್ಳಾರಿಯಲ್ಲಿ ಶ್ರೀ ಶಂಕರಾಚಾರ್ಯರ ಜಯಂತಿ


ಬಳ್ಳಾರಿ, 16 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಶ್ರೀ ಶಂಕರಾಚಾರ್ಯರ ಜಯಂತಿ ಅಂಗವಾಗಿ ಏಪ್ರಿಲ್ 21ರಂದು ಬೆಳಿಗ್ಗೆ 11 ಗಂಟೆಗೆ ಭಾರತಿ ತೀರ್ಥ ಸಭಾಭವನನಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಳ್ಳಾರಿ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮವನ್ನು ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ನಾರಾ ಭರತ್ ರೆಡ್ಡಿ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಈ. ತುಕರಾಮ್, ಕೆ. ರಾಜಶೇಖರ ಬಸವರಾಜ ಹಿಟ್ನಾಳ್, ಡಾ. ಸೈಯದ್ ನಾಸೀರ್ ಹುಸೇನ್, ಜೆ.ಎನ್. ಗಣೇಶ್, ಮುಂಡರಗಿ ನಾಗರಾಜ್, ಬಿ. ನಾಗೇಂದ್ರ, ಬಿ.ಎಂ. ನಾಗರಾಜ, ಈ. ಅನ್ನಪೂರ್ಣ, ಡಾ. ಚಂದ್ರಶೇಖರ ಬಿ. ಪಾಟೀಲ, ಶಶೀಲ್ ಜಿ. ನಮೋಶಿ ಹಾಗೂ ವೈ.ಎಂ. ಸತೀಶ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಸಂಗನಕಲ್ಲಿನ ನಿವೃತ್ತ ಶಿಕ್ಷಕರಾದ ಕೆ.ಬಿ. ಸಿದ್ದಲಿಂಗಪ್ಪ ಅವರು ವಿಶೇಷ ಉಪನ್ಯಾಸ ನೀಡಲಿದ್ದು, ಕೆ. ಶಾಂತಶಾಸ್ತ್ರಿ ತಂಡದಿಂದ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಸಂಜೆ 5 ಗಂಟೆಗೆ ಶ್ರೀ ವೆಂಕಟೇಶ್ವರ ದೇವಸ್ಥಾನದಿಂದ ಶ್ರೀ ಶೃಂಗೇರಿ ಶಂಕರಮಠದವರೆಗೆ ಮೆರವಣಿಗೆ ನಡೆಯಲಿದೆ. ಮೆರವಣಿಗೆ ಇಂದಿರಾ ವೃತ್ತ, ಗಡಿಗಿ ಚೆನ್ನಪ್ಪ ವೃತ್ತ ಹಾಗೂ ಬೆಂಗಳೂರು ರಸ್ತೆ ಮಾರ್ಗವಾಗಿ ಸಾಗಲಿದೆ.

ಕಾರ್ಯಕ್ರಮದಲ್ಲಿ ನಾಗೇಂದ್ರ ಪ್ರಸಾದ್ ಕೆ., ಡಾ. ಸುಮನ್ ಡಿ. ಪನ್ನೇಕರ್, ಮಹಮ್ಮದ್ ಹಾರೀಸ್ ಸುಮೇರ್, ಮಹಮ್ಮದ್ ಝುಬೇರ್ ಎನ್. ಹಾಗೂ ಪಿ.ಎಸ್. ಮಂಜುನಾಥ ಉಪಸ್ಥಿತರಿರುವರು ಎಂದು ಬಿ. ನಾಗರಾಜ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande