9ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಕಾರ್ಯಕ್ರಮ
ಹಾಸನ, 17 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭಾರತ ಸರ್ಕಾರದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಏ.23 ರಿಂದ ಮೇ.22ರ ವರೆಗೆ ಹಾಸನ ಜಿಲ್ಲೆಯಾದ್ಯಂತ 9ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾಲು ಬಾಯಿ ರೋಗವು ದನ, ಎಮ್ಮೆ ಹಂದಿ, ಕುರಿ, ಮೇಕೆ
9ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಕಾರ್ಯಕ್ರಮ


ಹಾಸನ, 17 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಭಾರತ ಸರ್ಕಾರದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಏ.23 ರಿಂದ ಮೇ.22ರ ವರೆಗೆ ಹಾಸನ ಜಿಲ್ಲೆಯಾದ್ಯಂತ 9ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾಲು ಬಾಯಿ ರೋಗವು ದನ, ಎಮ್ಮೆ ಹಂದಿ, ಕುರಿ, ಮೇಕೆ ಮತ್ತು ವನ್ನ ಜೀವಿಗಳಲ್ಲಿ ಜ್ವರ ಹಾಗೂ ಕಾಲು ಮತ್ತು ಬಾಯಿಗಳಲ್ಲಿ ಉಣ್ಣು ಕಂಡುಬರುತ್ತದೆ ರೋಗಗಸ್ತ ಜಾನುವಾರುಗಳಲ್ಲಿ ಉತ್ಪಾದಕತೆ ಕುಂಠಿತಗೊಂಡು ರೈತಾಪಿ ವರ್ಗಕ್ಕೆ, ಇದರಿಂದ ಸಾಕಷ್ಟು ಆರ್ಥಿಕ ನಷ್ಟ ಉಂಟಾಗುತ್ತದೆ.

ಜಿಲ್ಲೆಯ ಎಲ್ಲಾ ರೈತ ಬಾಂಧವರು ಹಾಗೂ ಸಾರ್ವಜನಿಕರು ತಮ್ಮ ಜಾನುವಾರುಗಳಿಗೆ ಅಂದರೆ ಎಲ್ಲಾ ದನ ಮತ್ತು ಎಮ್ಮೆಗಳಿಗೆ ಹಾಗೂ 4 ತಿಂಗಳ ಮೇಲ್ಪಟ್ಟ ಎಲ್ಲಾ ಕರುಗಳಿಗೆ ತಮ್ಮದೇ ಕಾಲು ಬಾಯಿ ರೋಗದ ಲಸಿಕೆಯನ್ನು ಹಾಕಿಸುವ ಮೂಲಕ ತಮ್ಮ ಜಾನುವಾರುಗಳನ್ನು ಕಾಲು ಬಾಯಿ ರೋಗದಿಂದ ಸಂರಕ್ಷಿಸಿಕೊಂಡು ಈ ರೋಗದಿಂದ ಉಂಟಾಗಬಹುದಾದ ಆರ್ಥಿಕ ನಷ್ಟದಿಂದ ಪಾರಾಗಲು ಸಹಕರಿಸುವಂತೆ ಜಾನುವಾರು ಮಾಲೀಕರಲ್ಲಿ / ರೈತರಲ್ಲಿ ಕೋರಿದೆ.

ಸದರಿ ಲಸಿಕಾ ಕಾರ್ಯಕ್ರಮದಲ್ಲಿ ಪಶುಪಾಲನಾ ಮತ್ತು ವಶುವೈದ್ಯಕೀಯ ಸೇವಾ ಇಲಾಖೆಯ ಸಿಬ್ಬಂದಿ ವರ್ಗದವರು ಗ್ರಾಮಗಳಿಗೆ ಭೇಟಿ ನೀಡಿ ಉಚಿತವಾಗಿ ಜಾನುವಾರುಗಳಿಗೆ ಕಾಲುಬಾಯಿ ರೋಗದ ಲಸಿಕೆ ನೀಡಲಿದ್ದಾರೆ ಸದರಿ ಲಸಿಕಾ ಕಾರ್ಯಕ್ರಮದಲ್ಲಿ ಲಸಿಕೆ ಹಾಕಿದೆ ಜಾನುವಾರುಗಳ ವಿವರಗಳೊಂದಿಗೆ ಲಸಿಕಾ ಪ್ರಗತಿಯನ್ನು ಆಲ್ನೈಲ್ ನಲ್ಲಿ ಭಾರತ್ ವಶುಧನ್ ತಂತ್ರಾಂಶದಲ್ಲಿ ದಾಖಲು ಮಾಡಲಾಗುತ್ತದೆ ಹಾಗೂ ಜಿಲ್ಲೆಯ ಲಸಿಕಾ ಪ್ರಗತಿಯನ್ನು ಭಾರತ್ ಪಶುಧನ್ ಫೋರ್ಟಲ್ ನಲ್ಲಿ ವೀಕ್ಷಿಸಬಹುದಾಗಿರುತ್ತದೆ ಎಂದು ಪಶುಪಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೆಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande