ಏಪ್ರಿಲ್ 21ರಂದು ಶ್ರೀ ಶಂಕರಾಚಾರ್ಯ ಜಯಂತಿ
ಚಿತ್ರದುರ್ಗ, 17 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆ ಸಮಾರಂಭ ಇದೇ ಏಪ್ರಿಲ್ 21ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗ
ಏಪ್ರಿಲ್ 21ರಂದು ಶ್ರೀ ಶಂಕರಾಚಾರ್ಯ ಜಯಂತಿ


ಚಿತ್ರದುರ್ಗ, 17 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆ ಸಮಾರಂಭ ಇದೇ ಏಪ್ರಿಲ್ 21ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ, ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಅಧ್ಯಕ್ಷ ಪಿ.ರಘು, ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಗಂಜಿಗಟ್ಟೆ, ಚಿತ್ರದುರ್ಗ ಬ್ರಾಹ್ಮಣ ಸಂಘದ ಅಧ್ಯಕ್ಷ ಪಿ.ಎಸ್.ಮಂಜುನಾಥ, ಕಾರ್ಯದರ್ಶಿ ಡಿ.ಜಿ.ಪ್ರಾಣೇಶ್ ರಾವ್ ಸೇರಿದಂತೆ ಜಿಲ್ಲೆಯ ಸಮಸ್ತ ಗೌರವಾನ್ವಿತ ಜನಪ್ರತಿನಿಧಿಗಳು, ಚುನಾಯಿತ ನಗರಸಭಾ ಸದಸ್ಯರು ಹಾಗೂ ಜಿಲ್ಲೆಯ ಬ್ರಾಹ್ಮಣ ಸಂಘದ ಸಮಸ್ತ ಗೌರವಾನ್ವಿತ ಮುಖಂಡರು ಹಾಗೂ ಗಣ್ಯರು ಭಾಗವಹಿಸುವರು. ಕೆ.ಆರ್.ರಮಾದೇವಿ ಉಪನ್ಯಾಸ ನೀಡುವರು. ಚಿತ್ರದುರ್ಗ ಮೀನಾಕ್ಷಿ ಭಟ್ ಮತ್ತು ತಂಡದವರಿಂದ ಗೀತಗಾಯನ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande