
ನವದೆಹಲಿ, 17 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನಲ್ಲಿ ನವೆಂಬರ್ ತಿಂಗಳಲ್ಲಿ ನಡೆಯಲಿರುವ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ ಪೂರ್ವಭಾವಿಯಾಗಿ ದೆಹಲಿಯಲ್ಲಿ ಇಂದು “ಬ್ರಿಡ್ಜ್ ಟು ಬೆಂಗಳೂರು” ಶೀರ್ಷಿಕೆಯ ಸಂವಾದ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗವಹಿಸಿ ವಿವಿಧ ರಾಷ್ಟ್ರಗಳ ರಾಯಭಾರಿಗಳು ಹಾಗೂ ಹೈ ಕಮಿಷನರ್ಗಳೊಂದಿಗೆ ಮಾತುಕತೆ ನಡೆಸಿದರು. ಕರ್ನಾಟಕದ ತಂತ್ರಜ್ಞಾನ, ಹೂಡಿಕೆ, ಸ್ಟಾರ್ಟ್ಅಪ್ ಹಾಗೂ ನವೋದ್ಯಮ ಕ್ಷೇತ್ರಗಳ ಕುರಿತು ಈ ಸಂದರ್ಭದಲ್ಲಿ ಚರ್ಚೆ ನಡೆಯಿತು.
ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ದೆಹಲಿಯಲ್ಲಿ ರಾಜ್ಯ ಸರ್ಕಾರದ ಪ್ರತಿನಿಧಿ ಟಿ.ಬಿ. ಜಯಚಂದ್ರ ಹಾಗೂ ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಉಪಸ್ಥಿತರಿದ್ದರು.
ರಾಜ್ಯವನ್ನು ಜಾಗತಿಕ ಹೂಡಿಕೆ ಮತ್ತು ತಂತ್ರಜ್ಞಾನ ಕೇಂದ್ರವಾಗಿ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಸಂವಾದ ಆಯೋಜಿಸಲಾಗಿದ್ದು, ಮುಂಬರುವ ಶೃಂಗಸಭೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಪಾಲ್ಗೊಳ್ಳುವಿಕೆ ಸೆಳೆಯುವ ಪ್ರಯತ್ನ ನಡೆದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa