ಕೌಶಲ್ಯಾಭಿವೃದ್ಧಿಗೆ ಸರ್ಕಾರದ ಆದ್ಯತೆ : ಸಚಿವ ಶರಣಪ್ರಕಾಶ ಪಾಟೀಲ
ಮಾಲೂರು, 17 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮಾಲೂರು ಸಮೀಪದ ಟೇಕಲ್ನಲ್ಲಿ ಐಟಿಐಗೆ ಚಾಲನೆ ನೀಡಿ ಮಾತನಾಡಿದ ಸಚಿವ ಶರಣಪ್ರಕಾಶ ಪಾಟೀಲ, ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳ ಮೂಲಕ ₹1.20 ಲಕ್ಷ ಕೋಟಿ ಮೌಲ್ಯದ ಸೌಲಭ್ಯಗಳನ್ನು ಬಡವರ ಮನೆಗಳಿಗೆ ತಲುಪಿಸಿದೆ ಎಂದು ತಿಳಿಸಿದರು. ಕೌಶಲ್ಯಾಭಿವೃದ್ಧಿ ಕ
Inauguration


ಮಾಲೂರು, 17 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮಾಲೂರು ಸಮೀಪದ ಟೇಕಲ್ನಲ್ಲಿ ಐಟಿಐಗೆ ಚಾಲನೆ ನೀಡಿ ಮಾತನಾಡಿದ ಸಚಿವ ಶರಣಪ್ರಕಾಶ ಪಾಟೀಲ, ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳ ಮೂಲಕ ₹1.20 ಲಕ್ಷ ಕೋಟಿ ಮೌಲ್ಯದ ಸೌಲಭ್ಯಗಳನ್ನು ಬಡವರ ಮನೆಗಳಿಗೆ ತಲುಪಿಸಿದೆ ಎಂದು ತಿಳಿಸಿದರು.

ಕೌಶಲ್ಯಾಭಿವೃದ್ಧಿ ಕ್ಷೇತ್ರಕ್ಕೆ ಸರ್ಕಾರ ಹೆಚ್ಚು ಆದ್ಯತೆ ನೀಡಿದ್ದು, ಯುವಕರಿಗೆ ಉದ್ಯೋಗಾಧಾರಿತ ತರಬೇತಿ ನೀಡುವ ಉದ್ದೇಶದಿಂದ ವಿವಿಧ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.

ಟೇಕಲ್ ನಲ್ಲಿ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ₹36 ಕೋಟಿ ವೆಚ್ಚದಲ್ಲಿ 350 ಮಂದಿಗೆ ವಸತಿ ಸೌಲಭ್ಯ ಹೊಂದಿರುವ ವಸತಿ ಶಾಲೆ ನಿರ್ಮಿಸಲಾಗುತ್ತಿದೆ. ಜೊತೆಗೆ ₹5 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡವೂ ನಿರ್ಮಾಣಗೊಂಡಿದೆ ಎಂದು ಸಚಿವರು ವಿವರಿಸಿದರು.

ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನೂ ಸರ್ಕಾರ ಸಮಾನವಾಗಿ ಮುಂದುವರಿಸುತ್ತಿದೆ. ರಾಜ್ಯದಾದ್ಯಂತ ವಿವಿಧ ಅಭಿವೃದ್ಧಿ ಯೋಜನೆಗಳು ಪ್ರಗತಿಯಲ್ಲಿದ್ದು, ಜನಸಾಮಾನ್ಯರ ಬದುಕು ಸುಧಾರಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಕೌಶಲ್ಯಾಭಿವೃದ್ಧಿ ಇಲಾಖೆಯ ಮೂಲಕ ರಾಜ್ಯದ ಎಲ್ಲೆಡೆ ಯುವ ಸಮೂಹಕ್ಕೆ ಅಗತ್ಯವಿರುವ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕರ್ನಾಟಕ ಯುವ ಕೌಶಲ್ಯ ಸಾರಥಿಗಳ ಕಣಜವಾಗಲಿದೆ ಎಂಬ ವಿಶ್ವಾಸವನ್ನು ಸಚಿವರು ವ್ಯಕ್ತಪಡಿಸಿದರು

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande