ಆಸಿಡ್ ದಾಳಿಗೆ ಒಳಗಾದ ವ್ಯಕ್ತಿಗಳಿಗೆ ಮಧ್ಯಂತರ ಪರಿಹಾರ ವಿತರಣೆ
ಚಿತ್ರದುರ್ಗ, 17 ಏಪ್ರಿಲ್ (ಹಿ.ಸ.) : ಆ್ಯಂಕರ್ : ಚಿತ್ರದುರ್ಗ ಜಿಲ್ಲೆಯ ಮಾಳಪ್ಪನಹಟ್ಟಿಯಲ್ಲಿ ನಡೆದಿದ್ದ ಆಸಿಡ್ ದಾಳಿಗೆ ಒಳಗಾದ ನೊಂದ ವ್ಯಕ್ತಿಗಳಿಗೆ ಒಂದು ತಿಂಗಳ ಒಳಗಾಗಿ ಮಧ್ಯಂತರ ಪರಿಹಾರದ ಚೆಕ್ ವಿತರಿಸುವ ಮೂಲಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ತ್ವರಿತ ನ್ಯಾಯ ಒದಗಿಸಿದೆ. ಕಳೆದ ಮಾರ್ಚ್
ಆಸಿಡ್ ದಾಳಿಗೆ ಒಳಗಾದ ವ್ಯಕ್ತಿಗಳಿಗೆ ಮಧ್ಯಂತರ ಪರಿಹಾರ ವಿತರಣೆ


ಚಿತ್ರದುರ್ಗ, 17 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗ ಜಿಲ್ಲೆಯ ಮಾಳಪ್ಪನಹಟ್ಟಿಯಲ್ಲಿ ನಡೆದಿದ್ದ ಆಸಿಡ್ ದಾಳಿಗೆ ಒಳಗಾದ ನೊಂದ ವ್ಯಕ್ತಿಗಳಿಗೆ ಒಂದು ತಿಂಗಳ ಒಳಗಾಗಿ ಮಧ್ಯಂತರ ಪರಿಹಾರದ ಚೆಕ್ ವಿತರಿಸುವ ಮೂಲಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ತ್ವರಿತ ನ್ಯಾಯ ಒದಗಿಸಿದೆ.

ಕಳೆದ ಮಾರ್ಚ್ 19ರಂದು ಚಿತ್ರದುರ್ಗ ಜಿಲ್ಲೆಯ ಮಾಳಪ್ಪನಹಟ್ಟಿಯಲ್ಲಿ ನಡೆದ ಆಸಿಡ್ ದಾಳಿಗೆ ಒಳಗಾದ ನೊಂದ ವ್ಯಕ್ತಿಗಳಿಗೆ ಘಟನೆ ನಡೆದ ಒಂದು ತಿಂಗಳ ಒಳಗಾಗಿ ಮಧ್ಯಂತರ ಪರಿಹಾರ ಮಂಜೂರು ಮಾಡಲಾಗಿದೆ.

ಪರಿಹಾರದ ಚೆಕ್ ಅನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ್ ಅವರು ನೊಂದ ವ್ಯಕ್ತಿಗಳಿಗೆ ಏಪ್ರಿಲ್ 16ರಂದು ಗುರುವಾರ ನೀಡಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande