
ಬಾಗಲಕೋಟೆ, 17 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ನವನಗರದ ಸೆಕ್ಟರ್ ನಂಬರ್-52ರಲ್ಲಿ ‘ಆಸರೆ’ ಉಪಕ್ರಮದಡಿ ಹಿರಿಯ ನಾಗರಿಕರ ಸಭೆ ನಡೆಯಿತು.
ಸಭೆಯಲ್ಲಿ ಹಿರಿಯ ನಾಗರಿಕರ ಸಮಸ್ಯೆಗಳು, ಅವರ ಸುರಕ್ಷತೆ, ಆರೋಗ್ಯ ಮತ್ತು ಅಗತ್ಯ ಸಹಾಯಗಳ ಕುರಿತು ಚರ್ಚಿಸಲಾಯಿತು. ಹಿರಿಯ ನಾಗರಿಕರಿಗೆ ಎದುರಾಗುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಪಡೆದು, ಅವುಗಳಿಗೆ ತಕ್ಷಣ ಸ್ಪಂದಿಸುವ ಭರವಸೆ ನೀಡಿದರು.
ಹಿರಿಯ ನಾಗರಿಕರ ಸುರಕ್ಷತೆಗಾಗಿ ಪೊಲೀಸ್ ಇಲಾಖೆಯ ವಿವಿಧ ಕ್ರಮಗಳ ಬಗ್ಗೆ ಸಭೆಯಲ್ಲಿ ವಿವರಿಸಲಾಯಿತು. ಅಗತ್ಯ ಸಂದರ್ಭಗಳಲ್ಲಿ ಪೊಲೀಸ್ ಸಹಾಯವನ್ನು ಹೇಗೆ ಪಡೆಯಬಹುದು ಎಂಬುದರ ಕುರಿತೂ ಜಾಗೃತಿ ಮೂಡಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa