
ಹಾಸನ, 17 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಹಾಸನ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಇವರ ಸಹಯೋಗದಲ್ಲಿ ಏ.20 ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಶ್ರೀ ಬಸವ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಮಾಜಿ ಪ್ರಧಾನ ಮಂತ್ರಿಗಳು ಹಾಗೂ ರಾಜ್ಯ ಸಭಾ ಸದಸ್ಯರಾದ ಹೆಚ್.ಡಿ ದೇವೇಗೌಡ ಘನ ಉಪಸ್ಥಿತರಿರಲಿದ್ದು, ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಭೈರೇಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ,
ಕರ್ನಾಟಕ ರಾಜ್ಯ ಗೃಹ ಮಂಡಳಿಯ ಅಧ್ಯಕ್ಷರು ಹಾಗೂ ಅರಸೀಕೆರೆ ಕ್ಷೇತ್ರದ ಶಾಸಕರಾದ ಕೆ.ಎಂ ಶಿವಲಿಂಗೇಗೌಡ ಅವರು ಗೌರವ ಉಪಸ್ಥಿತಿ ವಹಿಸಲಿದ್ದಾರೆ, ಶಾಸಕರಾದ ಸ್ವರೂಪ್ ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಸದರಾದ ಶ್ರೇಯಸ್ ಎಂ. ಪಟೇಲ್, ಶಾಸಕರುಗಳಾದ ಹೆಚ್.ಡಿ ರೇವಣ್ಣ, ಸಿ.ಎನ್ ಬಾಲಕೃಷ್ಣ, ಎ.ಮಂಜು, ಹೆಚ್.ಕೆ ಸುರೇಶ್, ಸಿಮೆಂಟ್ ಮಂಜು, ವಿಧಾನ ಪರಿಷತ್ ಶಾಸಕರುಗಳಾದ ಸೂರಜ್ ರೇವಣ್ಣ, ಮಧು ಜಿ, ಮಾದೇಗೌಡ, ಕೆ, ವಿವೇಕಾನಂದ, ಪಟೇಲ್ ಶಿವಣ್ಣ, ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ, ನಿವೃತ್ತ ಪ್ರಾಶುಪಾಲರಾದ ಟಿ.ಎಂ ಶಿವಶಂಕರಪ್ಪ ಅವರು ಉಪನ್ಯಾಸ ನೀಡಲಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 9.30ಕ್ಕೆ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಬಸವಣ್ಣರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯೊಂದಿಗೆ ಮೆರವಣಿಗೆಗೆ ಚಾಲನೆ ನೀಡಲಾಗುವುದು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa