ಜಾತಿ ತಾರತಮ್ಯ ತೊಲಗಿಸಲು ಕಠಿಣ ಕ್ರಮ : ಸಿದ್ದರಾಮಯ್ಯ
ಬೆಂಗಳೂರು, 17 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿಯ ಕಾರಣಕ್ಕಾಗಿ ಎದುರಾಗುವ ಅನ್ಯಾಯ, ಅಸಮಾನತೆ, ಅವಮಾನಗಳಿಂದಾಗಿ ಈಗಾಗಲೇ ಹಲವು ಜೀವಗಳು ಬಲಿಯಾಗಿದ್ದು, ರಾಜ್ಯದಲ್ಲಿ ಇಂತಹ ಸಾವುಗಳಿಗೆ ಕೊನೆಹಾಡಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್
Cm


ಬೆಂಗಳೂರು, 17 ಏಪ್ರಿಲ್ (ಹಿ.ಸ.) :

ಆ್ಯಂಕರ್ : ದೇಶಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿಯ ಕಾರಣಕ್ಕಾಗಿ ಎದುರಾಗುವ ಅನ್ಯಾಯ, ಅಸಮಾನತೆ, ಅವಮಾನಗಳಿಂದಾಗಿ ಈಗಾಗಲೇ ಹಲವು ಜೀವಗಳು ಬಲಿಯಾಗಿದ್ದು, ರಾಜ್ಯದಲ್ಲಿ ಇಂತಹ ಸಾವುಗಳಿಗೆ ಕೊನೆಹಾಡಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ರೋಹಿತ್ ವೇಮುಲ (ಬಹಿಷ್ಕಾರ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ವಿಧೇಯಕ ಕ್ಕೆ ಅನುಮೋದನೆ ನೀಡಲಾಗಿದೆ.

ಪ್ರಯೋಗಾಲಯದಲ್ಲಿ ಪ್ರಯೋಗಗಳನ್ನು ಮಾಡಲು ಅವಕಾಶ ನಿರಾಕರಣೆ ಮಾಡುವುದು, ಲಿಖಿತ ಹಾಗೂ ಭೌತಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗೆ ವೈವಾ, ಪ್ರಾಯೋಗಿಕ ಪರೀಕ್ಷೆಗಳಲ್ಲಿ ಜಾತಿಯ ಕಾರಣಕ್ಕಾಗಿ ಉದ್ದೇಶಪೂರ್ವಕವಾಗಿ ಕಡಿಮೆ ಅಂಕ ನೀಡುವುದು ಶಿಕ್ಷಾರ್ಹ ಅಪರಾಧವಾಗಲಿದೆ ಎಂದು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande