ವಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿದ ಶಾಸಕ ಎನ್.ಎಚ್. ಕೋನರೆಡ್ಡಿ
ಹುಬ್ಬಳ್ಳಿ, 17 ಏಪ್ರಿಲ್ (ಹಿ.ಸ.) : ಆ್ಯಂಕರ್ : ನವಲಗುಂದ ವಿಧಾನ ಸಭಾ ಮತಕ್ಷೇತ್ರ-69ರ ಅಣ್ಣಿಗೇರಿ ನಗರದ ಶ್ರೀ ಎಂ.ಜಿ. ಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆದ ಕರ್ನಾಟಕ ವಿಶ್ವವಿದ್ಯಾಲಯದ 2ನೇ ವಲಯ ಮಟ್ಟದ ಪುರುಷರ ಅಂತರ-ಕಾಲೇಜು ವಾಲಿಬಾಲ್ ಪಂದ್ಯಾವಳಿಯನ್ನು ಶಾಸಕ ಎನ್.ಎಚ್. ಕೋನರ
tournament


ಹುಬ್ಬಳ್ಳಿ, 17 ಏಪ್ರಿಲ್ (ಹಿ.ಸ.) :

ಆ್ಯಂಕರ್ : ನವಲಗುಂದ ವಿಧಾನ ಸಭಾ ಮತಕ್ಷೇತ್ರ-69ರ ಅಣ್ಣಿಗೇರಿ ನಗರದ ಶ್ರೀ ಎಂ.ಜಿ. ಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆದ ಕರ್ನಾಟಕ ವಿಶ್ವವಿದ್ಯಾಲಯದ 2ನೇ ವಲಯ ಮಟ್ಟದ ಪುರುಷರ ಅಂತರ-ಕಾಲೇಜು ವಾಲಿಬಾಲ್ ಪಂದ್ಯಾವಳಿಯನ್ನು ಶಾಸಕ ಎನ್.ಎಚ್. ಕೋನರೆಡ್ಡಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯುವಕರಲ್ಲಿ ಕ್ರೀಡಾ ಮನೋಭಾವ, ಶಿಸ್ತು ಹಾಗೂ ತಂಡಸ್ಪೂರ್ತಿಯನ್ನು ಬೆಳೆಸುವಲ್ಲಿ ಇಂತಹ ಪಂದ್ಯಾವಳಿಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.

ಕ್ರೀಡೆ ಎಂದರೆ ಕೇವಲ ಗೆಲುವು-ಸೋಲುಗಳಿಗಷ್ಟೇ ಸೀಮಿತವಲ್ಲ, ಅದು ಜೀವನ ಮೌಲ್ಯಗಳನ್ನು ಕಲಿಸುವ ಮಹತ್ವದ ಪಾಠಶಾಲೆಯಾಗಿದೆ. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸ, ನಾಯಕತ್ವ ಗುಣ, ಸಹಕಾರ ಮನೋಭಾವ ಹಾಗೂ ಆತ್ಮವಿಶ್ವಾಸ ಹೆಚ್ಚಿಸಲು ಕ್ರೀಡೆ ಅಗತ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಾಶಯ ತಿಳಿಸಿದ ಶಾಸಕ ಕೋನರೆಡ್ಡಿ, ಅವರು ಕ್ರೀಡಾ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಿ ಉನ್ನತ ಮಟ್ಟ ತಲುಪಲಿ ಎಂದು ಹಾರೈಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande