5 ರಿಂದ 17 ವರ್ಷ ಮಕ್ಕಳ ಆಧಾರ್ ಬೈಯೋಮೆಟ್ರಿಕ್ ಅಪ್ಡೇಟ್
ಕೊಪ್ಪಳ, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : 5 ರಿಂದ 17 ವರ್ಷದೊಳಗಿನ ಮಕ್ಕಳ ಆಧಾರ್ ಬೈಯೋಮೆಟ್ರಿಕ್ ಅಪ್ಡೇಟ್ ಮಾಡಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ತಿಳಿಸಿದ್ದಾರೆ. 5 ರಿಂದ 17 ವಯೋಮಿತಿಯ ಮಕ್ಕಳ ಆಧಾರ್ ಸಂಖ್ಯೆಗೆ ಕಡ್ಡಾಯ ಬೈಯೋಮೆಟ್ರಿಕ್ ಅಪ್ಡೇಟ್ಗಾಗಿ (Mandatory
5 ರಿಂದ 17 ವರ್ಷ ಮಕ್ಕಳ ಆಧಾರ್ ಬೈಯೋಮೆಟ್ರಿಕ್ ಅಪ್ಡೇಟ್ ಮಾಡಿಸಿ-


ಕೊಪ್ಪಳ, 18 ಏಪ್ರಿಲ್ (ಹಿ.ಸ.) :

ಆ್ಯಂಕರ್ : 5 ರಿಂದ 17 ವರ್ಷದೊಳಗಿನ ಮಕ್ಕಳ ಆಧಾರ್ ಬೈಯೋಮೆಟ್ರಿಕ್ ಅಪ್ಡೇಟ್ ಮಾಡಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ತಿಳಿಸಿದ್ದಾರೆ.

5 ರಿಂದ 17 ವಯೋಮಿತಿಯ ಮಕ್ಕಳ ಆಧಾರ್ ಸಂಖ್ಯೆಗೆ ಕಡ್ಡಾಯ ಬೈಯೋಮೆಟ್ರಿಕ್ ಅಪ್ಡೇಟ್ಗಾಗಿ (Mandatory Biometric Update) ಎಂದಿನಂತೆ ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ 2026ರ ಸೆಪ್ಟೆಂಬರ್ 30 ರವರೆಗೆ ಉಚಿತವಾಗಿ ಅವಕಾಶ ಕಲ್ಪಿಸಲಾಗಿರುತ್ತದೆ.

ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ ಹಾಗೂ ಸಂಬಂಧಿಸಿದ ದಾಖಲೆಗಳೊಂದಿಗೆ ತಮ್ಮ ಹತ್ತಿರದ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ನವೀಕರಿಸಿಕೊಳ್ಳಬಹುದಾಗಿದೆ. ಇದರಿಂದಾಗಿ ಮಕ್ಕಳ ಶಾಲೆಯ ದಾಖಲಾತಿ, ವಿವಿಧ ಸ್ಪರ್ದಾತ್ಮಕ ಪರೀಕ್ಷೆಗಳು, ಸರ್ಕಾರದ ವಿವಿಧ ಯೋಜನೆಗಳು, ವಿದ್ಯಾರ್ಥಿವೇತನ, ತರಬೇತಿಗಳು ಸೇರಿದಂತೆ ಇತ್ಯಾದಿ ಯೋಜನೆಗಳ ಲಾಭ ಪಡೆಯಲು ಅನುಕೂಲವಾಗಲಿದೆ.

ಈ ಪ್ರಯುಕ್ತ ಜಿಲ್ಲೆಯ ಎಲ್ಲಾ ಪೋಷಕರು ಈ ಪ್ರಕ್ರಿಯೆಯನ್ನು ಜವಾಬ್ದಾರಿಯಿಂದ ನಿರ್ವಹಿಸಿ ತಮ್ಮ ಮಕ್ಕಳಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವಲ್ಲಿ ಪ್ರಮುಖ ಪಾತ್ರವನ್ನುವಹಿಸುವಂತೆ ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande