ಸೋವೇನಹಳ್ಳಿ ಯುವಕ ನಾಪತ್ತೆ : ಪತ್ತೆಗೆ ಮನವಿ
ಸಂಡೂರು, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ಸಂಡೂರು ತಾಲ್ಲೂಕಿನ ಸೋವೇನಹಳ್ಳಿ ಗ್ರಾಮದ ನಿವಾಸಿಯಾದ ಕೆ.ಟಿ. ಅಜ್ಜಯ್ಯ ಎನ್ನುವ 22 ವರ್ಷದ ಯುವಕ ಏ.13 ರಂದು ಮನೆಯಿಂದ ಹೋದವನು ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠ
ಸೋವೇನಹಳ್ಳಿ ಯುವಕ ನಾಪತ್ತೆ: ಪತ್ತೆಗೆ ಮನವಿ


ಸಂಡೂರು, 18 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಸಂಡೂರು ತಾಲ್ಲೂಕಿನ ಸೋವೇನಹಳ್ಳಿ ಗ್ರಾಮದ ನಿವಾಸಿಯಾದ ಕೆ.ಟಿ. ಅಜ್ಜಯ್ಯ ಎನ್ನುವ 22 ವರ್ಷದ ಯುವಕ ಏ.13 ರಂದು ಮನೆಯಿಂದ ಹೋದವನು ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.

ಚಹರೆ : ಎತ್ತರ ಅಂದಾಜು 5.2 ಅಡಿ, ಕೋಲು ಮುಖ, ಗೋಧಿ ಮೈ ಬಣ್ಣ ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಹಳದಿ ಬಣ್ಣದ ಟೀ-ಶರ್ಟ್ ಮತ್ತು ಬಳಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.

ಕಾಣೆಯಾದ ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಚೋರನೂರು ಪೊಲೀಸ್ ಠಾಣೆಯ ದೂ.08395-295100, ಪಿಎಸ್ಐ ಮೊ.9480803063, ತೋರಣಗಲ್ಲು ಡಿಎಸ್ಪಿ ದೂ.08391-220326, ಮೊ.9480803010, ಸಂಡೂರು ಸಿಪಿಐ ದೂ.08395-260100, ಮೊ.9480803036 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande