
ಕೊಪ್ಪಳ, 18 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿ ಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ”ಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಪ್ರಕಾಶಕರು, ಮುದ್ರಕರು ಹಾಗೂ ಕಲಾವಿದರು ಅರ್ಜಿ ಸಲ್ಲಿಸಬಹುದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು, ಚಿತ್ರ ಕಲಾವಿದರ ಪೂರ್ಣ ವಿಳಾಸ, ದೂರವಾಣಿ ಸಂಖ್ಯೆ, ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಅರ್ಜಿ ನಮೂನೆಯೊಂದಿಗೆ 2026ರ ಮೇ 11 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ. ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ. ಕೊನೆಯ ದಿನಾಂಕ ಮುಗಿದ ನಂತರ ಬಂದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ.
ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್ಸೈಟ್ https://kpp.karnataka.gov.in/uploads/arji_1776257898.pdf ರಲ್ಲಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-560002, ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್