
ವಿಜಯಪುರ, 18 ಏಪ್ರಿಲ್ (ಹಿ.ಸ.) :
ಆ್ಯಂಕರ್ : ನಮ್ಮ ವಾರ್ಡಿಗೆ ಕುಡಿಯುವ ನೀರನ್ನು ಪೂರೈಸುವ ಭೂತ್ನಾಳ ಟ್ಯಾಂಕ್ನ 250 HP ಸಾಮರ್ಥ್ಯದ ಪಂಪ್ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ನೀರಿನ ಸರಬರಾಜಿನಲ್ಲಿ ವ್ಯಥೆ ಆಗಿದ್ದರಿಂದ ವಿಜಯಪುರ ಮಹಾನಗರ ಪಾಲಿಕೆ ಸದಸ್ಯ ಮಲ್ಲನಗೌಡ ಕೆರೆಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಿದರು.
ಬೇಸಿಗೆ ಕಾಲದ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು, ಸ್ಥಳೀಯ ಸದಸ್ಯ ಮಲ್ಲುಗೌಡ ಅವರು ಅಧಿಕಾರಿಗಳನ್ನು ಸ್ಥಳಕ್ಕೆ ಕರೆದುಕೊಂಡು ಹೋಗಿ ಸ್ವತಃ ಪರಿಶೀಲನೆ ನಡೆಸಿದರು. ತುರ್ತು ಕ್ರಮವಾಗಿ ಪಂಪ್ ದುರಸ್ತಿ ಕಾರ್ಯ ಕೈಗೊಳ್ಳಲಾಗಿದ್ದು, ಸಮಸ್ಯೆಯನ್ನು ಶೀಘ್ರದಲ್ಲೇ ನಿವಾರಿಸಲಾಯಿತು.
ದುರಸ್ತಿ ಕಾರ್ಯ ಪೂರ್ಣಗೊಂಡ ನಂತರ ವಾರ್ಡಿಗೆ ಮತ್ತೆ ನಿಯಮಿತವಾಗಿ ಕುಡಿಯುವ ನೀರಿನ ಸರಬರಾಜು ಪ್ರಾರಂಭವಾಗಿದ್ದು, ಸ್ಥಳೀಯ ನಿವಾಸಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದು ನಮ್ಮ ಕರ್ತವ್ಯವೆಂದು ಮೆಂಬರ್ ಮಲ್ಲುಗೌಡ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande