ಸ್ಟ್ರಾಂಗ್ ರೂಮ್ ಭದ್ರತೆಗೆ ಕಟ್ಟುನಿಟ್ಟಿನ ಸೂಚನೆ
ಬಾಗಲಕೋಟೆ, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ನಗರ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆ ಮತಪೆಟ್ಟಿಗೆಗಳನ್ನು ಇರಿಸಲಾದ ಸ್ಟ್ರಾಂಗ್ ರೂಮ್ನ ಭದ್ರತೆಗಾಗಿ ನಿಯೋಜಿಸಲಾದ ಅಧಿಕಾರಿ ಹಾಗೂ ಪೊಲೀಸ್ ಸಿಬ್ಬಂದಿಗೆ ಸೂಕ್ತ ಸೂಚನೆಗಳನ್ನು ನೀಡಲಾಗಿದೆ. ಮತಪೆಟ್ಟಿಗೆಗಳ ಸುರಕ್ಷತೆ ಅತ್ಯಂತ ಮ
ಭದ್ರತಾ


ಬಾಗಲಕೋಟೆ, 18 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ನಗರ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆ ಮತಪೆಟ್ಟಿಗೆಗಳನ್ನು ಇರಿಸಲಾದ ಸ್ಟ್ರಾಂಗ್ ರೂಮ್ನ ಭದ್ರತೆಗಾಗಿ ನಿಯೋಜಿಸಲಾದ ಅಧಿಕಾರಿ ಹಾಗೂ ಪೊಲೀಸ್ ಸಿಬ್ಬಂದಿಗೆ ಸೂಕ್ತ ಸೂಚನೆಗಳನ್ನು ನೀಡಲಾಗಿದೆ.

ಮತಪೆಟ್ಟಿಗೆಗಳ ಸುರಕ್ಷತೆ ಅತ್ಯಂತ ಮಹತ್ವದ್ದಾಗಿರುವುದರಿಂದ ಯಾವುದೇ ಲೋಪ ಉಂಟಾಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಯಿತು. ಸ್ಟ್ರಾಂಗ್ ರೂಮ್ ಸುತ್ತಮುತ್ತ ಕಠಿಣ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, 24 ಗಂಟೆಗಳ ನಿಗಾವಹಿಸುವ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲಾಗಿದೆ.

ಇದೇ ವೇಳೆ ಸಿಸಿಟಿವಿ ನಿಗಾ, ಪ್ರವೇಶ ನಿಯಂತ್ರಣ ಹಾಗೂ ತುರ್ತು ಪರಿಸ್ಥಿತಿಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಿಬ್ಬಂದಿಗೆ ಸ್ಪಷ್ಟ ಮಾರ್ಗದರ್ಶನ ನೀಡಲಾಗಿದೆ.

ಚುನಾವಣೆ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ನಂಬಿಕೆಯನ್ನು ಉಳಿಸಲು ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande