
ಕೊಪ್ಪಳ, 18 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮಹಿಳಾ ಮೀಸಲಾತಿ ವಿಧೇಯಕ (ನಾರಿಶಕ್ತಿ ವಂದನ್) ಮಸೂದೆಗೆ ಲೋಕಸಭೆಯಲ್ಲಿ ಸೋಲುಂಟಾಗಲು ಕಾಂಗ್ರೆಸ್ ಪಕ್ಷ ನೇರ ಹೊಣೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ್ ಟೀಕಿಸಿದ್ದಾರೆ.
ಮಹಿಳೆಯರಿಗೆ ರಾಜಕೀಯದಲ್ಲಿ 33% ಮೀಸಲಾತಿ ಒದಗಿಸಬೇಕೆಂಬುದು ದಶಕಗಳ ಬೇಡಿಕೆ. ಮಹಿಳೆ ಸಬಲೀಕರಣ ಗೊಂಡರೆ ದೇಶ ದೇಶ ಸಬಲೀಕರಣ ಗೊಳ್ಳುತ್ತದೆ ಎಂಬುದು ಮಸೂದೆಯ ಆಶಯ. ಆದರೆ ದಶಕಗಳಿಂದಲೂ ಮಹಿಳಾ ವಿರೋಧಿ ನೀತಿಯನ್ನು ಅನುಸರಿಸಿದ್ದ ಕಾಂಗ್ರೆಸ್ ತನ್ನ ನಿಜ ಬಣ್ಣವನ್ನು ಮತ್ತೊಮ್ಮೆ ಪ್ರದರ್ಶಿಸಿದೆ, ಎಂದು ಅವರು ಹೇಳಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರಕಾರ ಮಸೂದೆಯ ಅಂಗೀಕಾರಕ್ಕೆ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಿತು. ಆದರೆ 21ನೇ ಶತಮಾನದ ಭಾರತದಲ್ಲಿ ಮಹಿಳೆಯರನ್ನು ರಾಜಕೀಯ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷ ದೂರ ಇಟ್ಟದ್ದು ಶತಮಾನದ ದುರಂತ. ಇದಕ್ಕಾಗಿ ಆ ಪಕ್ಷ ಮಹಿಳೆಯರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.
ಕನ್ನಡ ನಾಡಿನ ಪ್ರತಿಯೊಬ್ಬ ಮಹಿಳೆ ಈ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು. ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಬೇಕು. ಮಹಿಳೆಯರಿಗಾಗಿ ಗ್ಯಾರೆಂಟಿ ಯೋಜನೆ ಜಾರಿ ಮಾಡಿದ್ದೇವೆ ಎಂದು ಹೇಳುವ ಕಾಂಗ್ರೆಸ್ ಈ ವಿಧೇಯಕವನ್ನು ಸೋಲಿಸಿದ್ದು ಏಕೆ ಎಂಬುದನ್ನು
ಸ್ಪಷ್ಟ ಪಡಿಸಬೇಕು. ಮಹಿಳೆಯರಿಗೆ ಆದ ಅನ್ಯಾಯದ ವಿರುದ್ಧ ಜೆಡಿಎಸ್ ಪಕ್ಷ ಜಾಗೃತಿ ಮೂಡಿಸುವ ಕೆಲಸವನ್ನು ದೊಡ್ಡ ಪ್ರಮಾಣದಲ್ಲಿ ಮಾಡಲಿದೆ ಎಂದು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್