
ಬೆಂಗಳೂರು, 18 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಬರದಿರುವುದಕ್ಕೆ ಕ್ಷೇತ್ರ ಮರುವಿಂಗಡನೆಯನ್ನು ಜೋಡಿಸಿದ್ದೇ ಪ್ರಮುಖ ಕಾರಣ ಎಂದು ಆರೋಪಿಸಿದರು.
2023ರಲ್ಲಿಯೇ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಗೊಂಡಿತ್ತು. ಆದರೆ ಅದನ್ನು ಸಾಂವಿಧಾನಿಕ ತಿದ್ದುಪಡಿಯೊಂದಿಗೆ ಹಾಗೂ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಗೆ ಜೋಡಿಸಿ ತರಲಾಗಿದ್ದರಿಂದ ಅದು ಕಾರ್ಯರೂಪಕ್ಕೆ ಬರಲಿಲ್ಲ ಎಂದು ಅವರು ಹೇಳಿದರು.
ಕ್ಷೇತ್ರ ಮರುವಿಂಗಡನೆ ಮಾಡದೇ ಕೇವಲ ಮಹಿಳಾ ಮೀಸಲಾತಿ ಮಸೂದೆಯನ್ನೇ ಪ್ರತ್ಯೇಕವಾಗಿ ಮಂಡಿಸಿದ್ದರೆ ಅದು ಜಾರಿಯಾಗುತ್ತಿತ್ತು. ಆದರೆ ರಾಜಕೀಯ ಉದ್ದೇಶದಿಂದ ಕ್ಷೇತ್ರ ಮರುವಿಂಗಡನೆ ಮತ್ತು ಮಹಿಳಾ ಮೀಸಲಾತಿಯನ್ನು ಒಟ್ಟಿಗೆ ತಂದ ಕಾರಣ ಮಸೂದೆ ವಿಫಲವಾಗಿದೆ ಎಂದು ಸಿದ್ದರಾಮಯ್ಯ ಟೀಕಿಸಿದ್ದು, ಕೇಂದ್ರ ಸರ್ಕಾರ ಈ ವಿಚಾರದಲ್ಲಿ ರಾಜಕೀಯ ಮಾಡಿದೆ ಎಂದು ಅವರು ಆರೋಪಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa