
ವಿಜಯಪುರ, 18 ಏಪ್ರಿಲ್ (ಹಿ.ಸ.) :
ಆ್ಯಂಕರ್ : ವಿಜಯಪುರ ಮಹಾನಗರ ಪಾಲಿಕೆಯಿಂದ ಕಸ ವಿಲೇವಾರಿ ಬಳಿಕ ಅದಕ್ಕೆ ಬೆಂಕಿ ಹಚ್ಚುತ್ತಿರುವ ಕ್ರಮವನ್ನು ತಕ್ಷಣ ನಿಲ್ಲಿಸಿ, ಸಾರ್ವಜನಿಕರನ್ನು ಹೊಗೆ ಹಾಗೂ ಸಾಂಕ್ರಾಮಿಕ ರೋಗಗಳಿಂದ ರಕ್ಷಿಸಬೇಕೆಂದು ಕರ್ನಾಟಕ ಯುವಗರ್ಜನೆ ಸಂಘಟನೆ ಆಗ್ರಹಿಸಿದೆ.
ಈ ಸಂಬಂಧ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಸಂಘಟನೆಯ ಪದಾಧಿಕಾರಿಗಳು, ಕಸ ಸುಡುವುದರಿಂದ ಪರಿಸರ ಮಾಲಿನ್ಯ ಹೆಚ್ಚುತ್ತಿದ್ದು, ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ತಿಳಿಸಿದ್ದಾರೆ.
ವಿಶೇಷವಾಗಿ ಮಕ್ಕಳಲ್ಲಿ ಹಾಗೂ ವೃದ್ಧರಲ್ಲಿ ಉಸಿರಾಟದ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ಸಮರ್ಪಕ ಕಸ ವಿಲೇವಾರಿ ವ್ಯವಸ್ಥೆಯನ್ನು ಅಳವಡಿಸಿಕೊಂಡು, ಪರಿಸರ ಸ್ನೇಹಿ ವಿಧಾನಗಳನ್ನು ಅನುಸರಿಸುವ ಮೂಲಕ ಜನರ ಆರೋಗ್ಯ ಕಾಪಾಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ಕುರಿತು ತಕ್ಷಣ ಕ್ರಮ ಕೈಗೊಂಡು ಸಾರ್ವಜನಿಕರ ಸುರಕ್ಷತೆ ಖಚಿತಪಡಿಸಬೇಕೆಂದು ಸಂಘಟನೆ ಮನವಿ ಮಾಡಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande