
ವಿಜಯಪುರ, 18 ಏಪ್ರಿಲ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯ ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಹಂಚಿನಾಳ ಗ್ರಾಮದ ನಿವಾಸಿಯಾದ ಅಲ್ಲಾಬಕ್ಷ ಮೀರಾಸಾಹೇಬ ಮಿರ್ಜಿ ಅವರಿಗೆ ಗಡಿನಾಡಿನ ಸಾಹಿತ್ಯ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆಗೆ ರಾಜ್ಯ ಸರ್ಕಾರದ ಪ್ರತಿಷ್ಠಿತ ‘ಕೆ.ಜಿ. ಕುಂದಣಗಾರ’ ಪ್ರಶಸ್ತಿ ಲಭಿಸಿರುವುದು ಸಂತಸ ತಂದಿದೆ ಎಂದು ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಅವರು ಪ್ರಕಟಣೆ ಮೂಲಕ ಶುಭ ಕೊರಿದರು.
ಗಡಿನಾಡಿನ ಭಾಗದಲ್ಲಿ ಕನ್ನಡ ಸಾಹಿತ್ಯವನ್ನು ಉತ್ತೇಜಿಸುವಲ್ಲಿ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಕನ್ನಡದ ಮಹತ್ವವನ್ನು ಪಸರಿಸುವಲ್ಲಿ ಅವರ ಪಾತ್ರ ಗಮನಾರ್ಹವಾಗಿದೆ.
ದೀರ್ಘಕಾಲದಿಂದ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಸಮಾಜಕ್ಕೆ ಮೌಲ್ಯಯುತ ಕೊಡುಗೆ ನೀಡಿರುವ ಅವರನ್ನು ಈ ಪ್ರಶಸ್ತಿಯ ಮೂಲಕ ಗೌರವಿಸಲಾಗಿದೆ.
ಪ್ರಶಸ್ತಿಯೊಂದಿಗೆ ₹5 ಲಕ್ಷ ನಗದು ಬಹುಮಾನ ಹಾಗೂ ಸನ್ಮಾನ ನೀಡಲಾಗಿದ್ದು, ಇದು ಅವರು ದಶಕಗಳ ಕಾಲ ಸಲ್ಲಿಸಿದ ಸಾಹಿತ್ಯ ಸೇವೆಗೆ ಸಿಕ್ಕ ಯೋಗ್ಯ ಮನ್ನಣೆ ಎಂದು ಸಾಹಿತ್ಯ ವಲಯದಿಂದ ಅಭಿಪ್ರಾಯ ವ್ಯಕ್ತವಾಗಿದೆ.
ಅಲ್ಲಾಬಕ್ಷ ಮಿರ್ಜಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ವ್ಯಕ್ತವಾಗುತ್ತಿದ್ದು, ಅವರ ಸಾಹಿತ್ಯಿಕ ಹಾಗೂ ಸಂಶೋಧನಾ ಸೇವೆ ಮುಂದುವರಿದು, ಬಸವನಾಡಿನ ಕೀರ್ತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಅವರು ಆಶಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande