
ವಿಜಯಪುರ, 18 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಇಂದು ವಿಜಯಪುರ ಜಿಲ್ಲೆಯ ಅರಕೇರಿ ಗ್ರಾಮದ ಸಮೀಪ ಕ್ಯಾಂಟರ್ ಹಾಗೂ ಬೊಲೇರೋ ವಾಹನಗಳ ಮಧ್ಯೆ ಅಪಘಾತ ಸಂಭವಿಸಿದ ಬಗ್ಗೆ 112 ತುರ್ತು ಸಹಾಯವಾಣಿಗೆ ಕರೆ ಬಂದ ತಕ್ಷಣ ಸ್ಪಂದಿಸಿದ 112 ತುರ್ತು ವಾಹನದ ಅಧಿಕಾರಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರು.
ಅವರ ತ್ವರಿತ ಕ್ರಮದಿಂದ ಹೆಚ್ಚಿನ ಅನಾಹುತ ತಪ್ಪಿದೆಯೆಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು.ಘಟನೆಯ ನಂತರ ಅಪಘಾತಕ್ಕೊಳಗಾದ ವಾಹನಗಳನ್ನು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದ್ದು, ಪ್ರಕರಣ ಕುರಿತು ಮುಂದಿನ ತನಿಖೆ ನಡೆಯುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande