ಮುಧೋಳದಲ್ಲಿ ಮಕ್ಕಳಿಗೆ ಈಜುಕಲಿಕೆ ಸೌಲಭ್ಯ : ಉತ್ಸಾಹದ ಸಂಭ್ರಮ
ಬಾಗಲಕೋಟೆ, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದಲ್ಲಿ ಸ್ಥಳೀಯ ಮಕ್ಕಳಿಗೆ ಈಜು ಕಲಿಕೆಯ ಸೌಲಭ್ಯವನ್ನು ಒದಗಿಸಿರುವುದು ಸಂತಸದ ಸಂಗತಿಯಾಗಿದ್ದು, ಇದರ ಮೂಲಕ ಮಕ್ಕಳಲ್ಲಿ ಆತ್ಮವಿಶ್ವಾಸ ಹಾಗೂ ದೈಹಿಕ ಸಾಮರ್ಥ್ಯ ಹೆಚ್ಚಿಸಲು ಮಹತ್ವದ ಹೆಜ್ಜೆಯಾಗಿದೆ ಎಂದು ರಾಜಕೀಯ ಮುಖಂಡ
ಈಜು


ಬಾಗಲಕೋಟೆ, 18 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದಲ್ಲಿ ಸ್ಥಳೀಯ ಮಕ್ಕಳಿಗೆ ಈಜು ಕಲಿಕೆಯ ಸೌಲಭ್ಯವನ್ನು ಒದಗಿಸಿರುವುದು ಸಂತಸದ ಸಂಗತಿಯಾಗಿದ್ದು, ಇದರ ಮೂಲಕ ಮಕ್ಕಳಲ್ಲಿ ಆತ್ಮವಿಶ್ವಾಸ ಹಾಗೂ ದೈಹಿಕ ಸಾಮರ್ಥ್ಯ ಹೆಚ್ಚಿಸಲು ಮಹತ್ವದ ಹೆಜ್ಜೆಯಾಗಿದೆ ಎಂದು ರಾಜಕೀಯ ಮುಖಂಡ ಶಿವಾನಂದ ಕುಬಸದ ಅಭಿಪ್ರಾಯ ಪಟ್ಟರು.

ಈಜು ತರಬೇತಿ ಕೇಂದ್ರದಲ್ಲಿ ಭಾಗವಹಿಸಿದ ಮಕ್ಕಳ ಉತ್ಸಾಹ ಗಮನ ಸೆಳೆಯಿತು. ನೀರಿನಲ್ಲಿ ಚುರುಕುತನದಿಂದ ಈಜು ಕಲಿಯುತ್ತಿರುವ ಮಕ್ಕಳನ್ನು ನೋಡಿದರೆ ಸಂಭ್ರಮವೇ ಮೂಡುತ್ತದೆ. ತರಬೇತುದಾರರ ಮಾರ್ಗದರ್ಶನದಲ್ಲಿ ಮಕ್ಕಳು ನಿಯಮಿತವಾಗಿ ಅಭ್ಯಾಸ ಮಾಡುತ್ತಿದ್ದು, ತಮ್ಮ ಕೌಶಲ್ಯವನ್ನು ದಿನದಿಂದ ದಿನಕ್ಕೆ ಅಭಿವೃದ್ಧಿಪಡಿಸುತ್ತಿದ್ದಾರೆ.

ಸ್ಥಳೀಯರು ಹಾಗೂ ಪಾಲಕರು ಈ ಸೌಲಭ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇಂತಹ ಕಾರ್ಯಕ್ರಮಗಳು ಮಕ್ಕಳ ಸಮಗ್ರ ಅಭಿವೃದ್ಧಿಗೆ ನೆರವಾಗುತ್ತವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande