ಪಾರಂಪರಿಕ ತಾಣಗಳ ಸಂರಕ್ಷಣೆ ನಮ್ಮ ಹೊಣೆ : ವಿಶ್ವ ಪಾರಂಪರಿಕ ದಿನದ ಸಂದೇಶ
ವಿಜಯಪುರ, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ಇತಿಹಾಸವನ್ನು ಮರೆತವರು ಇತಿಹಾಸ ಸೃಷ್ಟಿಸಲಾರರು ಎಂಬ ಸಂದೇಶದೊಂದಿಗೆ ವಿಶ್ವ ಪಾರಂಪರಿಕ ದಿನವನ್ನು ಆಚರಿಸಲಾಯಿತು. ವಿಜಯಪುರ ಜಿಲ್ಲೆಯ ಇಂಡಿ ಶಾಸಕ ಯಶವಂತರಾಯಗೌಡ ಪ್ರಕಟಣೆ ಮೂಲಕ ವಿಶ್ವ ಪಾರಂಪರಿಕ ದಿನದ ಕುರಿತು ಶುಭ ಕೊರಿದ ಅವರು, ನಮ್ಮ ಭವ್ಯ ಪರಂಪರ
ದಿನ


ವಿಜಯಪುರ, 18 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಇತಿಹಾಸವನ್ನು ಮರೆತವರು ಇತಿಹಾಸ ಸೃಷ್ಟಿಸಲಾರರು ಎಂಬ ಸಂದೇಶದೊಂದಿಗೆ ವಿಶ್ವ ಪಾರಂಪರಿಕ ದಿನವನ್ನು ಆಚರಿಸಲಾಯಿತು.

ವಿಜಯಪುರ ಜಿಲ್ಲೆಯ ಇಂಡಿ ಶಾಸಕ ಯಶವಂತರಾಯಗೌಡ ಪ್ರಕಟಣೆ ಮೂಲಕ ವಿಶ್ವ ಪಾರಂಪರಿಕ ದಿನದ ಕುರಿತು ಶುಭ ಕೊರಿದ ಅವರು, ನಮ್ಮ ಭವ್ಯ ಪರಂಪರೆಯೇ ನಮಗೆ ಭವಿಷ್ಯದ ದಾರಿ ದೀಪವಾಗಿದ್ದು, ಪಾರಂಪರಿಕ ತಾಣಗಳು ನಮ್ಮ ನಾಡಿನ ಅಸ್ಮಿತೆಯ ಪ್ರತೀಕವಾಗಿವೆ ಎಂಬುದನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು ಎಂದರು.

ವಿಶ್ವವಿಖ್ಯಾತ ಪಾರಂಪರಿಕ ತಾಣಗಳು ಕೇವಲ ಪ್ರವಾಸಿ ಕೇಂದ್ರಗಳಲ್ಲ, ಅವು ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಇತಿಹಾಸದ ಜೀವಂತ ಸಾಕ್ಷಿಗಳಾಗಿವೆ. ಇಂತಹ ಅಮೂಲ್ಯ ತಾಣಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.

ಪಾರಂಪರಿಕ ತಾಣಗಳ ಸಂರಕ್ಷಣೆಗೆ ಸರ್ಕಾರದ ಜೊತೆಗೆ ಸಾರ್ವಜನಿಕರ ಸಹಭಾಗಿತ್ವ ಅತ್ಯಂತ ಅಗತ್ಯವಾಗಿದೆ. ಪರಿಸರ ಸಂರಕ್ಷಣೆ, ಸ್ವಚ್ಛತೆ ಹಾಗೂ ಜಾಗೃತಿಯ ಮೂಲಕ ಈ ತಾಣಗಳ ಮೌಲ್ಯವನ್ನು ಉಳಿಸಬಹುದು ಎಂದು ತಿಳಿಸಿದರು.

ಈ ಹಿನ್ನೆಲೆಯಲ್ಲಿ ಸಮಸ್ತ ನಾಡಬಾಂಧವರಿಗೂ ವಿಶ್ವ ಪಾರಂಪರಿಕ ದಿನದ ಶುಭಾಶಯಗಳನ್ನು ತಿಳಿಸಲಾಗಿದ್ದು, ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಪರಂಪರೆಯನ್ನು ಕಾಪಾಡುವ ಸಂಕಲ್ಪವನ್ನು ಕೈಗೊಳ್ಳಬೇಕೆಂದು ಕರೆ ನೀಡಲಾಯಿತು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande