ವಿಶ್ವ ಪಾರಂಪರಿಕ ದಿನ
ಬೆಂಗಳೂರು, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಶ್ವ ಪಾರಂಪರಿಕ ದಿನದ ಅಂಗವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕದ ವಾಸ್ತುಶಿಲ್ಪ ಹಾಗೂ ಸಾಂಸ್ಕೃತಿಕ ವೈಭವವನ್ನು ಉಳಿಸಿ ಬೆಳೆಸುವ ಅಗತ್ಯವನ್ನು ಒತ್ತಿಹೇಳಿದ್ದಾರೆ. ಈ ಕುರಿತು ಸಂದೇಶ ಹಂಚಿಕೊಂಡಿರುವ ಅವರು, ವಾಸ್ತುಶಿಲ್ಪದ ತವರಾದ
Dk


ಬೆಂಗಳೂರು, 18 ಏಪ್ರಿಲ್ (ಹಿ.ಸ.) :

ಆ್ಯಂಕರ್ : ವಿಶ್ವ ಪಾರಂಪರಿಕ ದಿನದ ಅಂಗವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕದ ವಾಸ್ತುಶಿಲ್ಪ ಹಾಗೂ ಸಾಂಸ್ಕೃತಿಕ ವೈಭವವನ್ನು ಉಳಿಸಿ ಬೆಳೆಸುವ ಅಗತ್ಯವನ್ನು ಒತ್ತಿಹೇಳಿದ್ದಾರೆ.

ಈ ಕುರಿತು ಸಂದೇಶ ಹಂಚಿಕೊಂಡಿರುವ ಅವರು, ವಾಸ್ತುಶಿಲ್ಪದ ತವರಾದ ಕರ್ನಾಟಕದ ಹಿರಿಮೆಯನ್ನು ಪ್ರವಾಸಿ ತಾಣಗಳ ಮೂಲಕ ಜಗತ್ತಿಗೆ ಪರಿಚಯಿಸಬೇಕಿದೆ ಎಂದು ಹೇಳಿದ್ದಾರೆ. ರಾಜ್ಯದ ಶ್ರೀಮಂತ ಪರಂಪರೆ, ಶಿಲ್ಪಕಲೆ ಹಾಗೂ ಐತಿಹಾಸಿಕ ಸ್ಮಾರಕಗಳನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ದೇವಾಲಯಗಳು, ಕೋಟೆಗಳು, ಅರಮನೆಗಳು ಮತ್ತು ಪುರಾತನ ಸ್ಮಾರಕಗಳು ರಾಜ್ಯದ ವೈಭವವನ್ನು ಸಾರುವ ಹೆಮ್ಮೆಯ ಸಂಕೇತಗಳಾಗಿವೆ. ಈ ಪರಂಪರೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಬೇಕು ಎಂದು ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande