ಜಮಖಂಡಿಯಲ್ಲಿ ಶಿವಾಜಿ ಜಯಂತ್ಯೋತ್ಸವಕ್ಕೆ ಅದ್ಧೂರಿ ಚಾಲನೆ
ಬಾಗಲಕೋಟೆ, 19 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವದ ನಿಮಿತ್ಯವಾಗಿ ನಗರದ ಶಿವಾಜಿ ವೃತ್ತದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಜಮಖಂಡಿ ಮತಕ್ಷೇತ್ರದ ಮಾಜಿ ಶಾಸಕರಾದ ಆನಂದ ನ್ಯಾಮಗ
ಜಯಂತಿ


ಬಾಗಲಕೋಟೆ, 19 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವದ ನಿಮಿತ್ಯವಾಗಿ ನಗರದ ಶಿವಾಜಿ ವೃತ್ತದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಜಮಖಂಡಿ ಮತಕ್ಷೇತ್ರದ ಮಾಜಿ ಶಾಸಕರಾದ ಆನಂದ ನ್ಯಾಮಗೊಂಡ ಅವರು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶಿವಾಜಿ ಮಹಾರಾಜರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಛತ್ರಪತಿ ಶಿವಾಜಿ ಮಹಾರಾಜರು ಧೈರ್ಯ, ಶೌರ್ಯ ಹಾಗೂ ಆಡಳಿತ ಕೌಶಲ್ಯಗಳು ಇಂದಿನ ಯುವಜನತೆಗೆ ಮಾದರಿಯಾಗಿವೆ ಎಂದರು.

ಶಿವಾಜಿ ಮಹಾರಾಜರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಈ ವೇಳೆ ಹಲವಾರು ಗಣ್ಯರು, ಸಾರ್ವಜನಿಕರು ಹಾಗೂ ಯುವಕರು ಉಪಸ್ಥಿತರಿದ್ದು, ಜಯಂತ್ಯೋತ್ಸವವನ್ನು ಭಕ್ತಿ ಭಾವದಿಂದ ಆಚರಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande