ವಿಜಯಪುರ ಜಿಲ್ಲಾ ಪಂಚಾಯಿತಿ ಆವರಣದಲ್ಲಿ “ಸಂಡೇಸ್ ಆನ್ ಸೈಕಲ್” ಸ್ವಚ್ಛತಾ ರೈಡ್ ಯಶಸ್ವಿ
ವಿಜಯಪುರ, 19 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭಾನುವಾರಂದು ವಿಜಯಪುರ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸ್ವಚ್ಛ ಭಾರತ ಅಭಿಯಾನ ಯೋಜನೆಯಡಿ “ಸಂಡೇಸ್ ಆನ್ ಸೈಕಲ್” ಸ್ವಚ್ಛತಾ ರೈಡ್ ಅಭಿಯಾನವನ್ನು ಆಯೋಜಿಸಿ ಯಶಸ್ವಿಗೊಳಿಸಲಾಯಿತು. ಸ್ವಚ್ಛತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡ ಈ
ಸ್ವಚ್ಛ


ವಿಜಯಪುರ, 19 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಭಾನುವಾರಂದು ವಿಜಯಪುರ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸ್ವಚ್ಛ ಭಾರತ ಅಭಿಯಾನ ಯೋಜನೆಯಡಿ “ಸಂಡೇಸ್ ಆನ್ ಸೈಕಲ್” ಸ್ವಚ್ಛತಾ ರೈಡ್ ಅಭಿಯಾನವನ್ನು ಆಯೋಜಿಸಿ ಯಶಸ್ವಿಗೊಳಿಸಲಾಯಿತು.

ಸ್ವಚ್ಛತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡ ಈ ಸೈಕಲ್ ರ್ಯಾಲಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಕ್ರಿಯವಾಗಿ ಭಾಗವಹಿಸಿದರು. ಸಾರ್ವಜನಿಕರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವುದು ಹಾಗೂ ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಕೈಜೋಡಿಸುವ ಸಂದೇಶವನ್ನು ಈ ಅಭಿಯಾನ ನೀಡಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಮಾನ್ಯ ಯೋಜನಾ ನಿರ್ದೇಶಕರಾದ ಅಶೋಕ ಕಲಘಟಗಿ, ಸಹಾಯಕ ಯೋಜನಾಧಿಕಾರಿಗಳಾದ ಅರುಣಕಯಮಾರ್ ಡಳವಿ ಸೇರಿದಂತೆ ಜಿಲ್ಲಾ ಪಂಚಾಯತಿ ಕಾರ್ಯಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande