
ಬಾಗಲಕೋಟೆ, 19 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಮತ ಪೆಟ್ಟಿಗೆಗಳನ್ನು ಇರಿಸಲಾದ ಸ್ಟ್ರಾಂಗ್ ರೂಮ್ನ ಭದ್ರತೆಯ ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೂಕ್ತ ಸೂಚನೆಗಳನ್ನು ನೀಡಿದರು.
ಈ ವೇಳೆ ಭದ್ರತೆ ಸಂಬಂಧಿತ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ, 24 ಗಂಟೆಗಳ ನಿಗಾವಹಣೆ, ಸಿಸಿಟಿವಿ ಮೇಲ್ವಿಚಾರಣೆ ಹಾಗೂ ಪ್ರವೇಶ ನಿಯಂತ್ರಣ ಕ್ರಮಗಳನ್ನು ಖಚಿತಪಡಿಸಿಕೊಳ್ಳಲು ಸೂಚಿಸಲಾಯಿತು.
ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ತಕ್ಷಣ ಮೇಲಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ತಿಳಿಸಲಾಯಿತು.
ಮತ ಪೆಟ್ಟಿಗೆಗಳ ಸುರಕ್ಷತೆ ಅತ್ಯಂತ ಮಹತ್ವದ್ದಾಗಿರುವುದರಿಂದ ಯಾವುದೇ ರೀತಿಯ ನಿರ್ಲಕ್ಷ್ಯ ಸಹಿಸಲಾಗುವುದಿಲ್ಲ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದರು.
ಕರ್ತವ್ಯ ನಿರ್ವಹಣೆಯಲ್ಲಿ ಶಿಸ್ತು ಹಾಗೂ ಜವಾಬ್ದಾರಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande