
ಬಾಗಲಕೋಟೆ, 19 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ
ಬನಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಬಂಡಿಗಣಿ ಪ್ರದೇಶಕ್ಕೆ ಇಟ್ನಾಳ್ ಗ್ರಾಮದಿಂದ ಆಗಮಿಸುತ್ತಿರುವ ಭಕ್ತರ ಪಾದಯಾತ್ರೆ ಹಾಗೂ ಬಂಡಿಗಣಿ ಮಠದಲ್ಲಿ ವಾಸ್ತವ್ಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬನಹಟ್ಟಿ ಪೊಲೀಸರು ಭದ್ರತಾ ಬಂದೋಬಸ್ತ್ ಕೈಗೊಂಡರು.
ಈ ಸಂಬಂಧ ಕರ್ತವ್ಯಕ್ಕೆ ನಿಯೋಜಿತರಾದ ಅಧಿಕಾರಿ ಹಾಗೂ ಸಿಬ್ಬಂದಿಗೆ ಸೂಕ್ತ ಮಾರ್ಗಸೂಚಿಗಳನ್ನು ನೀಡಲಾಗಿದ್ದು, ಭಕ್ತರ ಸುರಕ್ಷತೆ ಹಾಗೂ ಶಾಂತಿ ಕಾಪಾಡಲು ವಿಶೇಷ ಗಮನ ಹರಿಸುವಂತೆ ಸೂಚಿಸಲಾಗಿದೆ.
ಪಾದಯಾತ್ರೆ ವೇಳೆ ಸಂಚಾರ ನಿಯಂತ್ರಣ, ಜನಸಂದಣಿ ನಿರ್ವಹಣೆ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇರುವುದರಿಂದ, ಮಠದ ಸುತ್ತಮುತ್ತ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಅಗತ್ಯ ಇರುವ ಕಡೆಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ, ನಿರಂತರ ನಿಗಾವಹಣೆ ಮಾಡುವಂತೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande