ಅರ್ಜುಣಗಿಯಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಭೂಮಿಪೂಜೆ ; ಅಂತರ್ಜಲ ವೃದ್ಧಿಗೆ ಮಹತ್ವದ ಹೆಜ್ಜೆ
ವಿಜಯಪುರ, 19 ಏಪ್ರಿಲ್ (ಹಿ.ಸ.) : ಆ್ಯಂಕರ್ : ಅಂತರ್ಜಲ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಸರಣಿ ಬಾಂದಾರಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಅದರ ಭಾಗವಾಗಿ ಅರ್ಜುಣಗಿ ಗ್ರಾಮದಲ್ಲಿ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ನೆರವ
ಪೂಜೆ


ವಿಜಯಪುರ, 19 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಅಂತರ್ಜಲ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಸರಣಿ ಬಾಂದಾರಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಅದರ ಭಾಗವಾಗಿ ಅರ್ಜುಣಗಿ ಗ್ರಾಮದಲ್ಲಿ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ನೆರವೇರಿಸಿದರು.

ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆಯ ವತಿಯಿಂದ ರೂ. 989 ಲಕ್ಷ ಅಂದಾಜು ವೆಚ್ಚದಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆ ಕೈಗೊಳ್ಳಲಾಗುತ್ತಿದೆ. ಈ ಚೆಕ್ ಡ್ಯಾಂ ನಿರ್ಮಾಣದಿಂದ ಅರ್ಜುಣಗಿ, ಕುಮಠೆ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಳವಾಗುವ ನಿರೀಕ್ಷೆಯಿದೆ.

ಇದರಿಂದ ಕುಡಿಯುವ ನೀರಿನ ಲಭ್ಯತೆ ಸುಧಾರಿಸುವುದರ ಜೊತೆಗೆ ನೀರಾವರಿ ಸೌಲಭ್ಯವೂ ವೃದ್ಧಿಯಾಗಲಿದೆ. ಕೃಷಿ, ತೋಟಗಾರಿಕೆ ಹಾಗೂ ಹೈನುಗಾರಿಕೆಗೆ ಮತ್ತಷ್ಟು ಉತ್ತೇಜನ ದೊರೆಯುವ ಮೂಲಕ ರೈತರ ಆರ್ಥಿಕ ಸ್ಥಿತಿ ಬಲವಾಗಲಿದೆ ಎಂದು ತಿಳಿಸಿದರು.

ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಇಲಾಖೆಯ ಅಧಿಕಾರಿಗಳು, ಗ್ರಾಮದ ಹಿರಿಯರು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande