
ಶಿವಮೊಗ್ಗ, 19 ಏಪ್ರಿಲ್ (ಹಿ.ಸ.) :
ಆ್ಯಂಕರ್ : ತೋಟಗಾರಿಕೆ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಹಿರಿಯ ಸಹಾಯಕರ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ಅರ್ಹ ರೈತ ಮಕ್ಕಳಿಗೆ ಹಮ್ಮಿಕೊಳ್ಳಲಾಗಿರುವ 10 ತಿಂಗಳ ವಸತಿ ಸಹಿತ ತೋಟಗಾರಿಕೆ ತರಬೇತಿ ಕಾರ್ಯಕ್ರಮದ ಅರ್ಜಿ ಅವಧಿಯನ್ನು ಏ. 21 ರವರೆಗೆ ವಿಸ್ತರಿಸಲಾಗಿದೆ.
ಈ ಹಿಂದೆ ಅರ್ಜಿ ಸಲ್ಲಿಸಲು ಏಪ್ರಿಲ್ 15 ನ್ನು ಅಂತಿಮ ದಿನಾಂಕವಾಗಿ ನಿಗದಿಗೊಳಿಸಲಾಗಿತ್ತು.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು
ದೂರವಾಣಿ: 08182-222794
ಮೊಬೈಲ್: 9686950460 ನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa