ಕಬ್ಬು ನುರಿಸುವ ಹಂಗಾಮಿಗೆ ಪೂರ್ವಸಿದ್ಧತೆ
ನಿಪ್ಪಾಣಿ, 19 ಏಪ್ರಿಲ್ (ಹಿ.ಸ.) : ಆ್ಯಂಕರ್ : ನಿಪ್ಪಾಣಿಯ ಶ್ರೀ ಹಾಲಸಿದ್ದನಾಥ ಸಹಕಾರಿ ಸಕ್ಕರೆ ಕಾರ್ಖಾನೆಯ 2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಸಂಬಂಧಿಸಿದ ತಾಂತ್ರಿಕ ಪೂರ್ವಸಿದ್ಧತಾ ಕಾರ್ಯಗಳಿಗೆ ಇಂದು ಚಾಲನೆ ನೀಡಲಾಯಿತು. ಕಾರ್ಖಾನೆಯ ಯಾಂತ್ರಿಕ ವಿಭಾಗದ ಪ್ರಮುಖ ರೊಲರ್ಗಳಿಗೆ ಜೋಲ್ಲೆ
Pooja


ನಿಪ್ಪಾಣಿ, 19 ಏಪ್ರಿಲ್ (ಹಿ.ಸ.) :

ಆ್ಯಂಕರ್ : ನಿಪ್ಪಾಣಿಯ ಶ್ರೀ ಹಾಲಸಿದ್ದನಾಥ ಸಹಕಾರಿ ಸಕ್ಕರೆ ಕಾರ್ಖಾನೆಯ 2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಸಂಬಂಧಿಸಿದ ತಾಂತ್ರಿಕ ಪೂರ್ವಸಿದ್ಧತಾ ಕಾರ್ಯಗಳಿಗೆ ಇಂದು ಚಾಲನೆ ನೀಡಲಾಯಿತು.

ಕಾರ್ಖಾನೆಯ ಯಾಂತ್ರಿಕ ವಿಭಾಗದ ಪ್ರಮುಖ ರೊಲರ್ಗಳಿಗೆ ಜೋಲ್ಲೆ ದಂಪತಿ ಪೂಜೆ ಸಲ್ಲಿಸಿ, ಹಂಗಾಮು ಯಶಸ್ವಿಯಾಗಲೆಂದು ಶುಭ ಹಾರೈಸಿದರು. ಕಬ್ಬು ನುರಿಸುವ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರವಹಿಸುವ ಯಾಂತ್ರಿಕ ಸಾಧನಗಳ ಪೂಜೆಯೊಂದಿಗೆ ಹಂಗಾಮಿನ ಆರಂಭಿಕ ಕಾರ್ಯಗಳು ಅಧಿಕೃತವಾಗಿ ಆರಂಭಗೊಂಡವು.

ಇದೇ ಸಂದರ್ಭದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಹಾಗೂ ಜಗಜ್ಯೋತಿ ಬಸವೇಶ್ವರ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ, ಶಿವ-ಬಸವ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾರ್ಖಾನೆಯ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕ ಮಂಡಳಿ ಸದಸ್ಯರು, ಪಕ್ಷದ ಕಾರ್ಯಕರ್ತರು, ರೈತರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande