
ವಿಜಯಪುರ, 19 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಬಲೇಶ್ವರ ಮತಕ್ಷೇತ್ರದ ಹೆಬ್ಬಾಳಟ್ಟಿ ಗ್ರಾಮದಲ್ಲಿ ನಡೆದ ಚಂದ್ರಗಿರಿ ಸಿದ್ದರಾಮೇಶ್ವರ ಜಾತ್ರಾ ಮಹೋತ್ಸವದಲ್ಲಿ ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಅವರು ಭಾಗವಹಿಸಿ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ಸುಖ, ಶಾಂತಿ ಮತ್ತು ಸಮೃದ್ಧಿ ಲಭಿಸಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು. ಜಾತ್ರಾ ಮಹೋತ್ಸವವು ಭಕ್ತಿಭಾವದ ವಾತಾವರಣದಲ್ಲಿ ನೆರವೇರಿದ್ದು, ಭಕ್ತರ ಉತ್ಸಾಹ ವಿಶೇಷವಾಗಿತ್ತು.
ಇದೇ ವೇಳೆ ಮಠದ ಪರಮಪೂಜ್ಯ ಗುರುಗಳಾದ ಸಿದ್ದಲಿಂಗಯ್ಯ ಸ್ವಾಮೀಜಿ ಅವರ ಕುಶಲೋಪರಿ ವಿಚಾರಿಸಿ ಆಶೀರ್ವಾದವರು ಸಚಿವರು ಪಡೆದರು.
ಕಾರ್ಯಕ್ರಮದಲ್ಲಿ ತಾಯಂದಿರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಜಾತ್ರೆಯ ಸಂಭ್ರಮವನ್ನು ಹೆಚ್ಚಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande